ಉಡುಪಿಯಲ್ಲಿ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ - Mahanayaka
12:39 AM Saturday 14 - December 2024

ಉಡುಪಿಯಲ್ಲಿ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ

gududeepa
24/10/2022

ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಆಶ್ರಯದಲ್ಲಿ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಹಭಾಗಿತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ದೀಪಿಕಾ- 2022’ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ ಉಡುಪಿ ಬನ್ನಂಜೆ ಶ್ರೀನಾರಾಯಣಗುರು ಶಿವಗಿರಿ ಸಭಾಭವನದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಕೆಪಿಸಿಸಿ ಪ್ಯಾನಲಿಸ್ಟ್ ವರೋನಿಕಾ ಕರ್ನೆಲಿಯೋ, ಮುಖಂಡರಾದ ಅಮೃತ್ ಶೆಣೈ, ಪ್ರಸಾದ್ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿದರು.

ಸ್ಪರ್ಧೆಯಲ್ಲಿ ಮಲ್ಪೆ ಸರಕಾರಿ ಪ್ರೌಢಶಾಲೆಯ ಅಕ್ಷಯ್ ಪ್ರಥಮ, ಪರ್ಕಳ ಬಿ.ಎಂ.ಸ್ಕೂಲ್ನ ಅಂಶುಲಾ ದ್ವೀತಿಯ ಹಾಗೂ ಪೆರಪಂಳ್ಳಿಯ ಉನ್ನತ್ ತೃತೀಯ ಬಹುಮಾನವನ್ನು ಪಡೆದುಕೊಂಡರು. ಸ್ಪರ್ಧೆಯ ವಿಜೇತರಿಗೆ ಇದೇ ಸಂದರ್ಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಶಲ್ ಶೆಟ್ಟಿ, ಭಾಸ್ಕರ ರಾವ್ ಕಿದಿಯೂರು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ರೋಶನ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಳೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹಾಗೂ ಡಾ.ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಮಾಧವ ಬನ್ನಂಜೆ ವಂದಿಸಿದರು. ಸ್ಪರ್ಧೆಯಲ್ಲಿ 350ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ