ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ಉದ್ಯಾನ್ ರೈಲ್ ಡಕ್ಡ್‌ ಪ್ರೆಸ್‌ ಗೆ ತಗುಲಿದ ಬೆಂಕಿ

bangalore
19/08/2023

ಬೆಂಗಳೂರು: ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ಉದ್ಯಾನ್ ರೈಲ್ ಡಕ್ಡ್‌ ಪ್ರೆಸ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ

ಮುಂಬೈನಿಂದ ಬೆಳಗ್ಗೆ 6 ಗಂಟೆಗೆ ಬಂದು ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್  ಪ್ರೆಸ್ ರೈಲಿಗೆ ಬೆಂಕಿ ತಗುಲಿದೆ. ಪ್ಲಾಟ್ ಫಾರಂ ನಂಬರ್ 3 ರಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ದುರಂತ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ರೈಲು ನಿಂತು ಪ್ರಯಾಣಿಕರೆಲ್ಲರು ಇಳಿದು ಹೋದ ಬಳಿಕ ಈ ಅವಘಡ ನಡೆದಿದೆ, ಸುಮಾರು 6.45ರ ಸಮಯದಲ್ಲಿ ಟ್ರೈನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ ರೈಲಿನ ಇಂಜಿನ್‌ನಲ್ಲಿನ ತಾಂತ್ರಿಕ ದೋಷದಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.  ರೈಲಿಗೆ ಬೆಂಕಿ ತಲುಗಲಿದ ಪರಿಣಾಮ ಎಸಿ‌3 ಟಯರ್ ಹಾಗೂ ಎಸಿ2 ಟಯರ್ ಭೋಗಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ.

ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯ ತೀವ್ರತೆಗೆ  ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ.  ನಾಲ್ಕೈದು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇತ್ತೀಚಿನ ಸುದ್ದಿ

Exit mobile version