1:33 AM Thursday 16 - October 2025

ಉದ್ಯೋಗದ ಆಮಿಷ: ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಮೂವರ ಬಂಧನ

arrest
09/02/2022

ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಹೊರ ರಾಜ್ಯಗಳಿಂದ ಹೆಣ್ಣು ಮಕ್ಕಳನ್ನು ಕರೆ ತಂದು ವೇಶ್ಯಾವಾಟಿಕೆ ದಂಧೆಗೆ ತಳ್ಳಿದ್ದ ಮೂವರು ಆರೋಪಿಗಳನ್ನು ಆನೇಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆನೇಕಲ್-ಚಂದಾಪುರ ಮುಖ್ಯರಸ್ತೆಯಲ್ಲಿನ ಅಪಾರ್ಟ್‌‌ಮೆಂಟ್‌ ವೊಂದರಲ್ಲಿ ರೋಮ್‌  ಬಾಡಿಗೆ ಪಡೆದಿದ್ದ ಆರೋಪಿಗಳು ಅಸ್ಸಾಂ ಸೇರಿದಂತೆ ಹೊರ ರಾಜ್ಯಗಳಲ್ಲಿನ ಬಡ ಹೆಣ್ಣು ಮಕ್ಕಳನ್ನು ಕೆಲಸ ಕೊಡಿಸುವ ಆಮಿಷವೊಡ್ಡಿ ಇಲ್ಲಿಗೆ ಕರೆತಂದು ವೇಶ್ಯಾವಾಟಿಕೆಗೆ ಬಳಕೆ ಮಾಡಿಕೊಳ್ಳುತ್ತಿದ್ದರು.
ಈ ಆರೋಪಿಗಳು ಕೆಲವು ವರ್ಷಗಳಿಂದ ಆನೇಕಲ್, ಚಂದಾಪುರ, ಹೆಬ್ಬಗೋಡಿ ಭಾಗಗಳಲ್ಲಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್‌ ನೇತೃತ್ವದ ತಂಡ ಅಪಾರ್ಟ್‌‌ಮೆಂಟ್‌ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಮೂವರ ಹೆಣ್ಣು ಮಕ್ಕಳನ್ನು ರಕ್ಷಿಸಿದ್ದಾರೆ, ವಶಕ್ಕೆ ಪಡೆದ ಮೂವರು ಹೆಣ್ಣುಮಕ್ಕಳನ್ನು ಸಾಂತ್ವನ ಕೇಂದ್ರಕ್ಕೆ ರವಾನೆ ಮಾಡಲಾಗಿದೆ. ಈ ಪ್ರಕರಣ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೇ ಕುಟುಂಬದ ಐವರ ಹತ್ಯೆ ಪ್ರಕರಣ: ಹಂತಕಿಯ ಬಂಧನ

ಜೈ ಶ್ರೀರಾಮ್ ಘೋಷಣೆಗೆ, ಅಲ್ಲಾಹು ಅಕ್ಬರ್ ಎಂದು ಪ್ರತಿರೋಧ ಒಡ್ಡಿದ ವಿದ್ಯಾರ್ಥಿನಿ: ವಿಡಿಯೋ ವೈರಲ್

ಸಮವಸ್ತ್ರ ವಿವಾದ: ಶಾಸಕರ ಎದುರೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು!

ಪ್ರತಿಭಟನೆಯ ಬಳಿಕ ಕೇಸರಿ ಪೇಟ ರಾಶಿ ಹಾಕುತ್ತಿರುವ ದೃಶ್ಯ ವೈರಲ್!

ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ: ಮದ್ರಸ ಅಧ್ಯಾಪಕ ಅರೆಸ್ಟ್

 

ಇತ್ತೀಚಿನ ಸುದ್ದಿ

Exit mobile version