ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು! - Mahanayaka
7:24 PM Saturday 18 - October 2025

ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು!

death
11/10/2022

ಉಡುಪಿ: ಕಳೆದ ಹಲವು ವರ್ಷಗಳಿಂದ ಕುವೈಟ್‌ ನಲ್ಲಿ ಉದ್ಯೋಗದಲ್ಲಿದ್ದ ಸಾಸ್ತಾನ ನಿವಾಸಿ 50 ವರ್ಷದ ಜಾಕ್ಸನ್ ಒಲಿವೇರ ಅವರು ಇಂದು ಬೆಳಿಗ್ಗೆ ಕುವೈಟ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.


Provided by

ಜಾಕ್ಸನ್ ಇಂದು ಮಧ್ಯಾಹ್ನ ಕರ್ತವ್ಯ ಮುಗಿಸಿ ಅವರು ವಾಸವಿದ್ದ ಕೊಠಡಿಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದರು ಎಂದು ತಿಳಿದು ಬಂದಿದೆ.

ಸಾಸ್ತಾನ ಪಾಂಡೇಶ್ವರ ನಿವಾಸಿಯಾದ ಜಾಕ್ಸನ್ ಅವರು ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಜಾಕ್ಸನ್ ಅವರ ಸಹೋದರಿ ಉದ್ಯಾವರದ ಸಾಂಸ್ಕೃತಿಕ ಸಂಸ್ಥೆ ನಿರಂತರ ಸಂಘಟನೆಯ ಸಕ್ರಿಯ ಸದಸ್ಯೆ. ಇವರಲ್ಲದೆ ಜಾನೆಟ್, ಜೇಸನ್, ಜೆಸಿಂತಾ ಎಂಬ ಸಹೋದರ ಸಹೋದರಿಯನ್ನು ಅಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ