ಯುನೈಟೆಡ್‌ ಕಿಂಗ್ಡಮ್ ಚುನಾವಣೆ: ಗೆದ್ದ ಪ್ರಧಾನಿ ಸ್ಟಾರ್ ಮರ್ ಗೆ ಪ್ರಧಾನಿ ಮೋದಿ ಅಭಿನಂದನೆ

05/07/2024

ಯುನೈಟೆಡ್‌ ಕಿಂಗ್ಡಮ್ ಚುನಾವಣೆಯಲ್ಲಿ ಜಯಗಳಿಸಿದ ಕೀರ್ ಸ್ಟಾರ್‌ಮರ್‌ ರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕರೊಂದಿಗೆ ಸಕಾರಾತ್ಮಕ ಸಹಯೋಗಕ್ಕಾಗಿ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ. ಜೊತೆಗೆ ನಿರ್ಗಮಿತ ಪ್ರಧಾನಿ ರಿಷಿ ಸುನಕ್ ರಿಗೆ ಸಂದೇಶವನ್ನೂ ನೀಡಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷವು ಕನ್ಸರ್ವೇಟಿವ್‌ ಪಕ್ಷದ ವಿರುದ್ಧ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಒಟ್ಟು 650 ಸ್ಥಾನಗಳ ಪೈಕಿ ಆಡಳಿತದಲ್ಲಿದ್ದ ಕನ್ಸರ್ವೇಟಿವ್ ಪಕ್ಷ ಕೇವಲ 120 ಸ್ಥಾನಗಳನ್ನು ಗೆದಿದ್ದರೆ, ಲೇಬರ್ ಪಕ್ಷವು 412 ಸ್ಥಾನಗಳನ್ನು ಗೆದ್ದಿದೆ.

ಚುನಾವಣೆಯಲ್ಲಿ ಗೆದ್ದ ಲೇಬರ್ ಪಕ್ಷದ ಕೀರ್ ಸ್ಟಾರ್‌ಮರ್‌ ರಿಗೆ ಶುಭ ಕೋರಿ ಟ್ವೀಟ್‌ ಮಾಡಿರುವ ಮೋದಿ, “ಪರಸ್ಪರ ಅಭಿವೃದ್ಧಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಸಕಾರಾತ್ಮಕ ಮತ್ತು ರಚನಾತ್ಮಕ ಸಹಯೋಗವನ್ನು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
ಸುನಕ್ ಅವರದ್ದ ‘ಶ್ಲಾಘನೀಯ ನಾಯಕತ್ವ’ ಎಂದು ಪ್ರಶಂಸಿಸಿರುವ ಮೋದಿ, ಭಾರತ-ಯುಕೆ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಸುನಕ್ ರ ಕೊಡುಗೆಗಳಿಗಾಗಿ ಧನ್ಯವಾದ ಅರ್ಪಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version