10:27 PM Wednesday 15 - October 2025

ಸೇನೆಗೆ ಸೇರುವ ಹಂಬಲ: ಉಕ್ರೇನ್ ಪಡೆಗೆ ಸೇರಿದ ತಮಿಳುನಾಡಿನ ಯುವಕ

sayenekesh
08/03/2022

ಚೆನ್ನೈ: ರಷ್ಯಾದ ವಿರುದ್ಧ ಹೋರಾಡಲು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸಾಯಿನಿಕೇಶ್ ರವಿಚಂದ್ರನ್ ಎಂಬ 21 ವರ್ಷದ ಯುವಕನೋರ್ವ ಉಕ್ರೇನ್‍ ನಲ್ಲಿ ಅರೆಸೈನಿಕ ಪಡೆಯನ್ನು ಸೇರಿಕೊಂಡಿರುವ ಬಗ್ಗೆ ವರದಿಯಾಗಿದೆ.

ಸಾಯಿನಿಕೇಶ್ ರವಿಚಂದ್ರನ್ ಬಗ್ಗೆ ವಿಚಾರಿಸಲು ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿದಾಗ ಭಾರತೀಯ ಸೇನೆಗೆ ಸೇರಲು ಸಾಯಿನಿಕೇಶ್ ರವಿಚಂದ್ರನ್ ಅರ್ಜಿ ಸಲ್ಲಿಸಿದ್ದರು. ಆದರೆ ತಿರಸ್ಕರಿಸಲಾಗಿತ್ತು ಎಂದು ಅವರ ಪೋಷಕರು ತಿಳಿಸಿದ್ದಾರೆ.

2018ರಲ್ಲಿ ಸೈನಿಕೇಶ್ ಖಾರ್ಕಿವ್‍ ನಲ್ಲಿರುವ ನ್ಯಾಷನಲ್ ಏರೋಸ್ಪೇಸ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಉಕ್ರೇನ್‍ ಗೆ ತೆರಳಿದ್ದರು. ಜುಲೈ 2022ರೊಳಗೆ ಕೋರ್ಸ್ ಪೂರ್ಣಗೊಳಿಸಬೇಕಿತ್ತು. ಈ ನಡುವೆ ಉಕ್ರೇನ್‍ ನಲ್ಲಿ ಯುದ್ಧ ಆರಂಭವಾಗಿದ್ದು, ಸಾಯಿನಿಕೇಶ್ ಜೊತೆಗೆ ಪೋಷಕರು ಸಂಪರ್ಕ ಕಳೆದುಕೊಂಡಿದ್ದಾರೆ.

ಭಾರತೀಯ ರಾಯಭಾರ ಕಚೇರಿಗೆ ಮನವಿ ಮಾಡಿದ ನಂತರ ಸಾಯಿನಿಕೇಶ್ ರವಿಚಂದ್ರನ್ ಅವರನ್ನು ಸಂಪರ್ಕಿಸಲು ಸಾಧ್ಯವಾಯಿತು. ಈ ವೇಳೆ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನಿಯನ್ ಅರೆಸೈನಿಕ ಪಡೆಯನ್ನು ಸೇರಿಕೊಂಡಿರುವುದಾಗಿ ತಮ್ಮ ಕುಟುಂಬಸ್ಥರಿಗೆ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ:  11 ವರ್ಷದ ಬಾಲಕನ ದಾರುಣ ಸಾವು

ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಐವರು ಸಜೀವ ದಹನ

ಈರುಳ್ಳಿ ಸೇವನೆಯಿಂದಾಗುವ ಪ್ರಯೋಜನಗಳೇನು?

ಒಡಹುಟ್ಟಿದ ಅಣ್ಣನನ್ನೇ ಇರಿದು ಕೊಂದ ತಮ್ಮ

 

ಇತ್ತೀಚಿನ ಸುದ್ದಿ

Exit mobile version