ಉಳ್ಳಾಲ ಖಾಝಿ ಕೂರ ತಂಙಳ್ ನಿಧನ

ಮಂಗಳೂರು: ಉಳ್ಳಾಲದ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಜು. 8ರಂದು ಬೆಳಗ್ಗೆ ಅವರು ನಿಧನರಾಗಿದ್ದಾರೆ .
ಅವರಿಗೆ 65 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಅಪರಾಹ್ನ 2 ಗಂಟೆಯ ವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಪಾರ್ಥಿವ ಶರೀರವು ಸಂಜೆ 7 ಗಂಟೆ ಸುಮಾರಿಗೆ ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತಲುಪಲಿದೆ. ಆ ಬಳಿಕ ಕಡಬ ತಾಲೂಕಿನ ಕೂರತ್ ಗೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ದಫನ ಕಾರ್ಯ ನೆರವೇರಲಿದೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97