9:56 PM Friday 11 - September 2026

ಸೆ.13ರಂದು ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

dasara
11/09/2026

ಉಳ್ಳಾಲ: ದ.ಕ. ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉಳ್ಳಾಲ ತಾಲೂಕು ಆಡಳಿತ, ಉಳ್ಳಾಲ ನಗರಸಭೆ, ಕೋಟೆಕಾರ್ ಪಪಂ ಹಾಗೂ ಸೋಮೇಶ್ವರ ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ಸೆ.13ರಂದು ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ತಾಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ದಸರಾ ಕ್ರೀಡಾಕೂಟದ ನೋಡೆಲ್ ಅಧಿಕಾರಿ ತ್ಯಾಗಮ್ ಹರೇಕಳ ತಿಳಿಸಿದರು.

ಕ್ರೀಡಾಪಟುಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನೋಂದಣಿ https://dasaracmcup.in/ ಮಾಡಿಕೊಳ್ಳಬೇಕು. ಕ್ರೀಡಾಕೂಟದ ದಿನ ಬೆಳಿಗ್ಗೆ 8:30ಕ್ಕೆ ಮಂಗಳೂರು ವಿವಿಯ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಕ್ರೀಡಾಕೂಟವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಿ ವಹಿಸಲಿದ್ದಾರೆ ಎಂದರು.

ಹೆಚ್ಚಿನ ಮಾಹಿತಿಗಾಗಿ ದಸರಾ ಕ್ರೀಡಾಕೂಟದ ನೋಡೆಲ್ ಅಧಿಕಾರಿ ತ್ಯಾಗಮ್ ಹರೇಕಳ – 9448529524ರನ್ನು ಸಂಪರ್ಕಿಸಬಹುದು.

ಸುದ್ದಿಗೋಷ್ಠಿಯಲ್ಲಿ ಉಳ್ಳಾಲ ತಾಲೂಕು ಇಒ ಗುರುದತ್ ಎಂ.ಎನ್. ಹಾಗೂ ಉಳ್ಳಾಲ ನಗರಸಭೆ ಪೌರಾಯುಕ್ತ ಸಂತೋಷ್ ಎಸ್.ಡಿ. ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler
Exit mobile version