ಸೆಕ್ಯುರಿಟಿ ಗಾರ್ಡ್ ಮೃತದೇಹ ಚರಂಡಿಯಲ್ಲಿ ಪತ್ತೆ! - Mahanayaka
1:16 PM Tuesday 16 - September 2025

ಸೆಕ್ಯುರಿಟಿ ಗಾರ್ಡ್ ಮೃತದೇಹ ಚರಂಡಿಯಲ್ಲಿ ಪತ್ತೆ!

security guard
31/12/2022

ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನಲ್ಲಿರೋ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.


Provided by

ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ (45) ಮೃತ ವ್ಯಕ್ತಿ. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಖಾಸಗಿ ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾರ್ಯನಿರ್ವಹಿಸುತ್ತಿದ್ದರು. ಡಿಸೆಂಬರ್ 27 ರಿಂದ ಕೆಲ್ಸಕ್ಕೆ ಹೋಗಿರಲಿಲ್ಲ. ಇಂದು ನಸುಕಿನ ಜಾವ ಕುತ್ತಾರು ಜಂಕ್ಷನ್‌ನಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ‌.

ಅಪರಿಚಿತ ವಾಹನ ಡಿಕ್ಕಿ ಹೊಡೆದು ಚರಂಡಿಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ರಾ ಎಂಬ ಶಂಕೆ ಇದೆ.ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ