ಉಳ್ಳಾಲ: ಸಮುದ್ರಕ್ಕಿಳಿದ ಮಹಿಳೆ ನೀರಲ್ಲಿ ಮುಳುಗಿ ಸಾವು: ನಾಲ್ವರ ರಕ್ಷಣೆ

ಉಳ್ಳಾಲ: ಸಮುದ್ರ ವಿಹಾರಕ್ಕೆ ಬಂದಿದ್ದ ನಾಲ್ವರು ಮಹಿಳೆಯರ ಪೈಕಿ ಒಬ್ಬರು ಮಹಿಳೆ ಸಮುದ್ರಪಾಲಾಗಿರುವ ಘಟನೆ ಉಳ್ಳಾಲ ಬೀಚ್ ಸಮುದ್ರದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್.ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ(57) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ಉಳ್ಳಾಲ ಬೀಚ್ ಗೆ ತೆರಳಿದ್ದ ನಾಲ್ವರು ಮಹಿಳೆಯರು, ಬೃಹತ್ ಅಲೆಯೊಂದರ ಹೊಡೆತಕ್ಕೆ ಸಮುದ್ರಪಾಲಾಗಿದ್ದಾರೆ. ಈ ವೇಳೆ ಸ್ಥಳೀಯರು ನಾಲ್ವರನ್ನು ರಕ್ಷಿಸಿದ್ದರು.
ಈ ಪೈಕಿ ಪರಿಮೀ ರತ್ನ ಕುಮಾರಿ ಅವರಿಗೆ ಪ್ರಜ್ಞೆ ತಪ್ಪಿತ್ತು. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97