ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್‌ ಗೆ ರಣಹದ್ದು ಡಿಕ್ಕಿ

shivakumar
02/05/2023

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್‌ ಗೆ ರಣಹದ್ದು ಡಿಕ್ಕಿಯಾಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಮುಳಬಾಗಿಲು ಕ್ಷೇತ್ರಕ್ಕೆ ತೆರಳುವ ಸಂದರ್ಭದಲ್ಲಿ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕ್ಯಾಪ್ಟರ್ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ.

ಹೆಚ್‌ಎಎಲ್‌ನಿಂದ ಮುಳಬಾಗಿಲಿಗೆ ಹೋಗುವ ಸಂದರ್ಭದಲ್ಲಿ ಹೋಸಕೋಟೆ ಹತ್ತಿರ ಈ ಘಟನೆ ಸಂಭವಿಸಿದೆ. ಮುಂಭಾಗದ ಗಾಜು ಪುಡಿ ಪುಡಿಯಾಗುತ್ತಿದ್ದಂತೆ ಚಾಲಕ ಹೆಲಿಕ್ಯಾಪ್ಟರ್ ಅನ್ನು ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಲಿಕಾಪ್ಟರ್ ಅಪಘಾತದಲ್ಲಿ ಡಿಕೆಶಿ ಸ್ವಲ್ಪದರಲ್ಲಿ ಪಾರಾಗದ್ದಾರೆನ್ನಲಾಗಿದೆ. ತುರ್ತು ಭೂಸ್ಪರ್ಶದ ಮೂಲಕ ಹೆಲಿಕಾಪ್ಟರ್​ನ್ನು ಎಚ್​ಎಎಲ್​ನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ.ಮಾರ್ಗಮಧ್ಯದಲ್ಲಿ ಹೆಲಿಕಾಪ್ಟರ್​​ ವಿಂಡ್ ಶೀಲ್ಡ್​ಗೆ ಹದ್ದು ಡಿಕ್ಕಿಯಾಘಿದ್ದರಿಂದ ಈ ಅಪಘಾತ ಸಂಭವಿಸಿದೆ. ಇನ್ನು ಈ ಅಪಘಾತದಲ್ಲಿ ಹೆಲಿಕಾಪ್ಟರ್ ನಲ್ಲಿದ್ದ ಖಾಸಗಿ ಸಂಸ್ಥೆ ಛಾಯಗ್ರಾಹಕನಿಗೆ ಗಾಜಿನ ಚೂರು ಚುಚ್ಚಿ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಸದ್ಯ ಹೆಲಿಕಾಪ್ಟರ್ ಪ್ರಯಾಣ ರದ್ದು ಮಾಡಿದ ಡಿಕೆಶಿ, ರಸ್ತೆ ಮೂಲಕ ಕೋಲಾರ ಮುಳಬಾಗಿಲು ಸಾರ್ವಜನಿಕ ಪ್ರಚಾರಕ್ಕೆ ತೆರಳುತ್ತಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, “ಯಾವುದೇ ಅವಘಡವಾಗಿಲ್ಲ, ಪೈಲಟ್ ನಿಧಾನವಾಗಿ ಹೆಚ್‌ಎಎಲ್‌ನಲ್ಲಿ ಹೆಲಿಕ್ಯಾಪ್ಟರ್ ಅನ್ನು ಸುರಕ್ಷಿತವಾಗಿ ಇಳಿಸಿದ್ದಾರೆ. ರಣಹದ್ದು ಡಿಕ್ಕಿಯಿಂದ ಗಾಜು ಪುಡಿಯಾಗಿದೆ” ಎಂದು ಹೇಳಿದ್ದಾರೆ.

ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದೆ ಎಲ್ಲರೂ ಸುರಕ್ಷಿತವಾಗಿದ್ದಾರೆ.” ಎಂದು ಹೇಳಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version