ಹವಾಮಾನ ವೈಪರೀತ್ಯ: ಉಮೇಶ್ ಕತ್ತಿ ಪಾರ್ಥಿವ ಶರೀರ ಏರ್ ಲಿಫ್ಟ್ ವಿಳಂಬ - Mahanayaka

ಹವಾಮಾನ ವೈಪರೀತ್ಯ: ಉಮೇಶ್ ಕತ್ತಿ ಪಾರ್ಥಿವ ಶರೀರ ಏರ್ ಲಿಫ್ಟ್ ವಿಳಂಬ

umesh katti
07/09/2022


Provided by

ಬೆಂಗಳೂರು:  ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದೆ.

ಉಮೇಶ್ ಕತ್ತಿ ಪಾರ್ಥಿವ ಶರೀರ ಹೆಚ್​ಎಎಲ್​ ಏರ್​ಪೋರ್ಟ್ ತಲುಪಿದ್ದು ಹವಾಮಾನ ವೈಪರೀತ್ಯ ಹಿನ್ನೆಲೆ ಏರ್​ ಲಿಫ್ಟ್ ಕಾರ್ಯ ವಿಳಂಬವಾಗಲಿದೆ ಎಂದು ತಿಳಿದು ಬಂದಿದೆ.

ಚೆನ್ನೈನಲ್ಲೂ ಹವಾಮಾನ ವೈಪರೀತ್ಯ ಹಿನ್ನೆಲೆ ಚೆನ್ನೈನಿಂದ ಬೆಂಗಳೂರಿಗೆ ಬರಬೇಕಿದ್ದ ವಿಶೇಷ ವಿಮಾನ ಕ್ಯಾನ್ಸಲ್ ಆಗಿ ಹೈದರಾಬಾದ್​​ ನಿಂದ ವಿಶೇಷ ವಿಮಾನ ಆಗಮಿಸುತ್ತಿದೆ. ಈ ವಿಶೇಷ ವಿಮಾನ 10:30ಕ್ಕೆ ಹೆಚ್​ ಎಎಲ್ ತಲುಪಲಿದೆ.

ರಾಜಕೀಯ ಗಣ್ಯರು ಹೆಚ್ ​ಎಎಲ್​ ಏರ್​ ಪೋರ್ಟ್ ನಲ್ಲಿ ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಬಿ.ಸಿ. ಪಾಟೀಲ್, ಸಚಿವ ಭೈರತಿ ಬಸವರಾಜ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೆಜೆ ಜಾರ್ಜ್, ಎಮ್.ಟಿ.ಬಿ.ನಾಗರಾಜ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ