ಅನಧಿಕೃತ ಗೋಸಾಗಾಟ: ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಟೇಟು!

ಪುತ್ತೂರು: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಲದಲ್ಲಿ ಬುಧವಾರ ಬೆಳಗಿನಜಾವ ನಡೆದಿದೆ.
ಕೇರಳ ಕಾಸರಗೋಡಿನ ಆರೋಪಿ ಅಬ್ದುಲ್ಲಾ (40), ಐಚರ್ ವಾಹನದಲ್ಲಿ 10 ಜಾನುವಾರು ಸಾಗಿಸುತ್ತಿದ್ದು, ಆತನೇ ಚಾಲಕನಾಗಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ವಾಹನ ನಿಲ್ಲಿಸದೆ ಮುಂದೆ ಹೋಗಿದ್ದು, ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದ್ದರು.
ಈ ವೇಳೆಗೆ ಆರೋಪಿಯು ತಾನು ಚಲಾಯಿಸುತ್ತಿದ್ದ ವಾಹನವನ್ನು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಸಿ, ಕೊಲೆಗೆ ಯತ್ನಿಸಿದ್ದಾನೆ. ಆಗ ಪಿಎಸ್ ಐ ಎರಡು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಾಹನದಲ್ಲಿದ್ದ ಇನ್ನೊಬ್ಬ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಅಬ್ದುಲ್ಲಾನನ್ನು ಚಿಕಿತ್ಸೆಗಾಗಿ ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋ ಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD