1:25 AM Saturday 25 - October 2025

ಅಂಗಡಿಯ ಸಹೋದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್‌ ಗಿರಿ: ಇಬ್ಬರು ಆರೋಪಿಗಳ ಬಂಧನ

mangalore news
28/11/2023

ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಅಂಗಡಿಯೊಂದರ ಇಬ್ಬರು‌ ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್‌ ಗಿರಿ ನಡೆಸಿದ ಘಟನೆ‌ ಮಂಗಳೂರಲ್ಲಿ ರಾತ್ರಿ ನಡೆದಿದೆ.

ಅನೈತಿಕ ಪೊಲೀಸ್ ಗಿರಿ‌ ನಡೆಸಿದ ಬಂಧಿತ ಆರೋಪಿಗಳನ್ನು ಅಕ್ಷಯ್ ರಾವ್, ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ.

ರಾತ್ರಿ ಮಂಗಳೂರು ನಗರದ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯ ಎಂಬುವವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ಮಂಗಳೂರು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಇಬ್ಬರು ಅಪರಿಚಿತರು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಇವರಿಬ್ಬರನ್ನು ತಡೆದು “ನೀವು ಹಿಂದೂ -ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ?” ಎಂದು ಪ್ರಶ್ನಿಸಿ ಅನೈತಿಕ ಪೊಲೀಸ್‌ ಗಿರಿ ನಡೆಸಿದ್ದರು.

ಅಷ್ಟರಲ್ಲಿ ಹೊಯ್ಸಳ ವಾಹನದ ಪೊಲೀಸರು ಇಬ್ಬರು ಉದ್ಯೋಗಿಗಳನ್ನು ರಕ್ಷಣೆ ಮಾಡಿ ಠಾಣೆಗೆ ಕರೆ ತಂದಿದ್ದರು. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇತ್ತೀಚಿನ ಸುದ್ದಿ

Exit mobile version