ಉತ್ತರಾಖಂಡ ವಿಧಾನ ಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ - Mahanayaka
5:45 AM Wednesday 27 - August 2025

ಉತ್ತರಾಖಂಡ ವಿಧಾನ ಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

uthara kanda
06/02/2024


Provided by

ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಯನ್ನು ಮಂಡಿಸಲಾಗಿದೆ.ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆ ವಿಧೇಯಕವನ್ನು ಮಂಡಿಸಿದರು.

ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರವಾದರೆ ಉತ್ತರಾಖಂಡ ಯುಸಿಸಿಯನ್ನು ಅಳವಡಿಸಿಕೊಳ್ಳುವ ದೇಶದ ಮೊದಲ ರಾಜ್ಯವಾಗಲಿದೆ ಮತ್ತು ಗುಜರಾತ್ ಹಾಗೂ ಅಸ್ಸಾಂ ಸೇರಿದಂತೆ ದೇಶದ ಹಲವು ಬಿಜೆಪಿ ಆಡಳಿತದ ರಾಜ್ಯಗಳು ಉತ್ತರಾಖಂಡ ಯುಸಿಸಿಯನ್ನು ಮಾದರಿಯಾಗಿ ಅನುಸರಿಸಲು ಮುಂದಾಗಿವೆ.

ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆ ಇದಾಗಿದೆ.

ಇತ್ತೀಚಿನ ಸುದ್ದಿ