ಕೇಂದ್ರ ಬಜೆಟ್ ಮಂಡನೆಗೆ ಡೇಟ್ ಫಿಕ್ಸ್ | ಜನವರಿ 29ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ
ನವದೆಹಲಿ: ಜನವರಿ 29ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ತಿಳಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 29ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ.
ಸಂಸತ್ತಿನ ಬಜೆಟ್ ಅಧಿವೇಶನ ಜ. 29ರಿಂದ ಫೆಬ್ರುವರಿ 15ರವರೆಗೂ ನಡೆಸಬೇಕೆಂದು ಸಮಿತಿ ಶಿಫಾರಸು ಮಾಡಿದೆ. , ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 8ರಿಂದ ಏಪ್ರಿಲ್ 8ರವರೆಗೂ ನಡೆಯಲಿದೆ ಎಂದು ತಿಳಿದುಬಂದಿದೆ.
2021-22ರ ಬಜೆಟ್ ಕುರಿತು ಬಜೆಟ್ ಪೂರ್ವ ಸಮಾಲೋಚನೆಯ ಭಾಗವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಡಿಸೆಂಬರ್ 14ರಂದು ಹಲವಾರು ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದರು.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.