ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ನವದೆಹಲಿ: NEET ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ವಿವಾದದ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
NEET ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ವಿರೋಧ ಪಕ್ಷಗಳು ಹಾಗೂ ಸಿಜೆಪಿ (CJP) ತೀವ್ರ ಹೋರಾಟ ಮತ್ತು ಪ್ರತಿಭಟನೆಗಳನ್ನು ನಡೆಸಿದ್ದವು. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶಾದ್ಯಂತ ಸಾಲು ಸಾಲು ಪ್ರತಿಭಟನೆಗಳು ನಡೆದಿದ್ದವು.
ಆರಂಭದಲ್ಲಿ ಧರ್ಮೇಂದ್ರ ಪ್ರಧಾನ್ ಅವರನ್ನು ಶಿಕ್ಷಣ ಸಚಿವಾಲಯದಿಂದ ಬೇರೊಂದು ಇಲಾಖೆಗೆ ವರ್ಗಾಯಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಪ್ರತಿಭಟನೆ ಮತ್ತು ರಾಜಕೀಯ ಒತ್ತಡ ಹೆಚ್ಚಾದ ಕಾರಣ ಕೊನೆಗೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























