ತಮಿಳರ ಕುರಿತ ತಪ್ಪು ಹೇಳಿಕೆ: ಕ್ಷಮೆಯಾಚಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ತಮಿಳುನಾಡಿನ ವ್ಯಕ್ತಿಯೊಬ್ಬ ಬಾಂಬ್ ಇಟ್ಟಿದ್ದಾನೆ ಎಂದು ಬಿಜೆಪಿ ನಾಯಕ ಹೇಳಿದ ನಂತರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಡುವೆ ವಾಕ್ಸಮರ ಭುಗಿಲೆದ್ದಿದೆ.
ಸ್ಟಾಲಿನ್ ಅವರು ಈ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹೇಳಿದ್ರೆ, ಕರಂದ್ಲಾಜೆ ಅವರು ಸ್ಟಾಲಿನ್ “ತುಷ್ಟೀಕರಣ ರಾಜಕೀಯ” ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದರು. ನಂತರ ಸಚಿವೆ ಶೋಭಾ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸಿದ್ದಾರೆ. ನಂತರ ಇದು “ಬೆಳಕನ್ನು ಬೆಳಗಿಸುವ ಉದ್ದೇಶವನ್ನು ಹೊಂದಿದೆ, ನೆರಳುಗಳನ್ನು ಬೀರಲು ಅಲ್ಲ” ಎಂದು ಹೇಳಿದ್ದಾರೆ.
ರಾಮೇಶ್ವರಂ ಸ್ಫೋಟದ ಹಿಂದಿರುವ ಬಾಂಬರ್ ತಮಿಳುನಾಡಿನ ಕೃಷ್ಣಗಿರಿ ಅರಣ್ಯದಲ್ಲಿ ನಿಮ್ಮ (ಸ್ಟಾಲಿನ್) ಮೂಗಿನ ಕೆಳಗೆ ತರಬೇತಿ ಪಡೆದಿದ್ದಾನೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿ ವಿವಾದ ಸೃಷ್ಟಿಸಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, “ತಮಿಳುನಾಡಿನ ಜನರು ಇಲ್ಲಿಗೆ ಬರುತ್ತಾರೆ, ಅಲ್ಲಿ ತರಬೇತಿ ಪಡೆಯುತ್ತಾರೆ ಮತ್ತು ಇಲ್ಲಿ ಬಾಂನ್ ಗಳನ್ನು ಇಡುತ್ತಾರೆ. ಅವರು ಕೆಫೆಯಲ್ಲಿ ಬಾಂಬ್ ಇಟ್ಟರು” ಎಂದು ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟವನ್ನು ಉಲ್ಲೇಖಿಸಿ ಶೋಭಾ ಹೇಳಿಕೆ ನೀಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth