ನಾಗಮಂಗಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
13/09/2024
ಮಂಡ್ಯ: ಗಣೇಶೋತ್ಸವ ಮೆರವಣಿಗೆ ವೇಳೆ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಾಗಮಂಗಲಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿದ ಕುಮಾರಸ್ವಾಮಿ, ಮಾಲೀಕರ ಅಳಲು ಆಲಿಸಿದರು.
ಕುಮಾರಸ್ವಾಮಿ ಜೊತೆಗೆ ಮಾಜಿ ಶಾಸಕರಾದ ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಇದ್ದರು.
ನಿನ್ನೆ ಈ ಘಟನೆ ಸಂಬಂಧ ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದರು. ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವೇ ನಾಗಮಂಗಲ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: