ಮನೆಯಲ್ಲೇ ಕುರುಡ ದಂಪತಿಯ ಅಸಹಜ‌ ಸಾವು: ತಡವಾಗಿ ಬೆಳಕಿಗೆ ಬಂತು ಪ್ರಕರಣ - Mahanayaka
5:34 AM Wednesday 10 - September 2025

ಮನೆಯಲ್ಲೇ ಕುರುಡ ದಂಪತಿಯ ಅಸಹಜ‌ ಸಾವು: ತಡವಾಗಿ ಬೆಳಕಿಗೆ ಬಂತು ಪ್ರಕರಣ

29/10/2024

ಕಣ್ಣು ಕಾಣಿಸದ ವೃದ್ಧ ದಂಪತಿಯ ಮಗ ಸಾವನ್ನಪ್ಪಿ 4 ದಿನಗಳು ಕಳೆದರೂ ಅದು ತಿಳಿಯದೇ ಶವದೊಂದಿಗೆ ಜೀವಿಸಿದ್ದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ದೃಷ್ಟಿ ಇರದ, 60 ವರ್ಷಕ್ಕಿಂತ ಮೇಲ್ಪಟ್ಟ ದಂಪತಿಗೆ ತಮ್ಮ ಮಗ ಸಾವನ್ನಪ್ಪಿದ್ದಾರೆ ಎಂದು ತಿಳಿದಿರಲಿಲ್ಲ ಮತ್ತು ಅವರು ಆಹಾರ ಮತ್ತು ನೀರಿಗಾಗಿ ಆತನನ್ನು ಕರೆಯಲು ಪ್ರಯತ್ನಿಸುತ್ತಿದ್ದರು.


Provided by

30 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ವೃದ್ಧ ದಂಪತಿಯನ್ನು ರಕ್ಷಿಸಲಾಗಿದೆ. ಮನೆಯಿಂದ ಅಸಹಜ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಯ ಮನೆಯವರು ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ 30 ವರ್ಷದ ವ್ಯಕ್ತಿಯ ಮೃತದೇಹ ಹಾಗೂ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ವೃದ್ಧ ಅಂಧ ದಂಪತಿ ಕಾಣಿಸಿದ್ದಾರೆ.

ಮನೆಯಲ್ಲಿ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ನಾಲ್ಕೈದು ದಿನಗಳ ಹಿಂದೆ ನಿದ್ರೆಯಲ್ಲಿಯೇ ಸಾವನ್ನಪ್ಪಿರುವ ಶಂಕೆ ಇದೆ ಎಂದು ನಾಗೋಲ್ ಪೊಲೀಸ್ ಠಾಣೆ ಎಸ್‌ಎಚ್‌ಒ ಸೂರ್ಯ ನಾಯಕ್ ಪ್ರಾಥಮಿಕ ತನಿಖೆಯಿಂದ ತಿಳಿಸಿದ್ದಾರೆ.ನಗರದ ಮತ್ತೊಂದು ಪ್ರದೇಶದಲ್ಲಿ ವಾಸಿಸುತ್ತಿರುವ ತಮ್ಮ ಹಿರಿಯ ಮಗನ ಬಗ್ಗೆ ದಂಪತಿಯಿಂದ ಮಾಹಿತಿ ಪಡೆದ ನಂತರ ಪೊಲೀಸರು ಅವರಿಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಪ್ರಕರಣ ದಾಖಲಿಸಲಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ