ಸಚಿವರಿಂದ ಅಸ್ಪೃಶ್ಯತೆ ಆಚರಣೆ: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಕೆ.ವೆಂಕಟೇಶ್ ವಿರುದ್ಧ ಪ್ರತಿಭಟನೆ - Mahanayaka

ಸಚಿವರಿಂದ ಅಸ್ಪೃಶ್ಯತೆ ಆಚರಣೆ: ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಕೆ.ವೆಂಕಟೇಶ್ ವಿರುದ್ಧ ಪ್ರತಿಭಟನೆ

protest
28/10/2023


Provided by

ಚಾಮರಾಜನಗರ: ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಆಗಮಿಸದೇ ನಮ್ಮ ಜನಾಂಗವನ್ನು ಅಸ್ಪೃಶ್ಯತೆಯಿಂದ ಕಾಣುತ್ತಿದ್ದಾರೆ ಎಂದು ವಾಲ್ಮೀಕಿ ಜನಾಂಗದವರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ವಾಲ್ಮೀಕಿ ಜಯಂತಿಗೆ ಜಿಲ್ಲಾ ಉಸ್ತುವಾರಿ ಸಚಿವರು ಗೈರು ಹಾಜರಾಗಿರೋದು ವಾಲ್ಮೀಕಿ ಜನಾಂಗದ ಆಕ್ರೋಶಕ್ಕೆ ಕಾರಣವಾಯ್ತು. ಉಸ್ತುವಾರಿ ಸಚಿವರು ನಮ್ಮ ಸಮುದಾಯವನ್ನು ಕಡೆಗಣಿಸಿ ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕಾರ್ಯಕ್ರಮದ ವೇದಿಕೆ ಮುಂಭಾಗದಲ್ಲೇ ಪ್ರತಿಭಟನೆ ನಡೆಸಿದ್ರು.

ದಿಢೀರ್ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬಳಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ಷಮೆ ಕೇಳಿ ಅನಾರೋಗ್ಯದ ಸ್ಪಷ್ಟನೆ ನೀಡಿದ್ದು, ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ