ಬೀದಿನಾಯಿಯನ್ನು ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಮಹಿಳಾ ಪೊಲೀಸ್ ಅಧಿಕಾರಿ!

richa sachan
19/08/2025

ಘಾಜಿಯಾಬಾದ್: ಬೀದಿನಾಯಿಯ ಜೀವ ಉಳಿಸಲು ಹೋಗಿ ಬೈಕ್ ನಿಂದ ಬಿದ್ದ ಮಹಿಳಾ ಸಬ್ ಇನ್ ಸ್ಪೆಕ್ಟರ್ ವೊಬ್ಬರಿಗೆ ಕಾರು ಡಿಕ್ಕಿಯಾಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ  ಉತ್ತರ ಪ್ರದೇಶದಲ್ಲಿ ನಡೆದಿದೆ.

ರಿಚಾ ಸಚನ್ (25) ಮೃತಪಟ್ಟವರಾಗಿದ್ದಾರೆ. ಸೋಮವಾರ ಕರ್ತವ್ಯ ಮುಗಿಸಿ ಕವಿ ನಗರ ಪೊಲೀಸ್ ಠಾಣೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಬೈಕ್ ಗೆ ಬೀದಿನಾಯಿ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದ ವೇಳೆ ಸಮತೋಲನ ಕಳೆದುಕೊಂಡ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ರಿಚಾ ಅವರಿಗೆ ಡಿಕ್ಕಿ  ಹೊಡೆದಿದ್ದು,  ಅವರು ಹೆಲ್ಮೇಟ್ ಧರಿಸಿದ್ದರೂ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಕವಿ ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ಭಾಸ್ಕರ್ ವರ್ಮಾ ಪಿಟಿಐಗೆ ತಿಳಿಸಿದ್ದಾರೆ.

ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಕಾನ್ಪುರ ನಿವಾಸಿಯಾಗಿದ್ದ ರಿಚಾ ಅವರನ್ನು 2023 ರಲ್ಲಿ ಸಬ್ ಇನ್ಸ್‌ ಪೆಕ್ಟರ್ ಆಗಿ ನೇಮಿಸಲಾಯಿತು. ಅವರು ಶಾಸ್ತ್ರಿ ನಗರ ಹೊರ ಠಾಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು ಮತ್ತು ಯುಪಿಎಸ್‌ ಸಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು.  ಆಕೆಯ ಪೋಷಕರು ಮುಂದಿನ ವರ್ಷ ಆಕೆಯ ಮದುವೆಯನ್ನು ನಡೆಸಲು ಯೋಚಿಸಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version