ದಲಿತ ಬಾಲಕಿಯರನ್ನು ಅತ್ಯಾಚಾರ ನಡೆಸಿ ಮರಕ್ಕೆ ನೇಣು ಹಾಕಿದ ದುಷ್ಕರ್ಮಿಗಳು: ಮತ್ತೊಂದು ಅಮಾನವೀಯ ಘಟನೆ - Mahanayaka
10:36 AM Wednesday 27 - August 2025

ದಲಿತ ಬಾಲಕಿಯರನ್ನು ಅತ್ಯಾಚಾರ ನಡೆಸಿ ಮರಕ್ಕೆ ನೇಣು ಹಾಕಿದ ದುಷ್ಕರ್ಮಿಗಳು: ಮತ್ತೊಂದು ಅಮಾನವೀಯ ಘಟನೆ

uttarpradesh
15/09/2022


Provided by

ಲಖಿಂಪುರ:  ಇಬ್ಬರು ದಲಿತ ಬಾಲಕಿಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉತ್ತರಪ್ರದೇಶದ ಲಖಿಂಪುರದ ನಿಗ್ಸಾನ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅತ್ಯಾಚಾರ ಎಸಗಿ ಹತ್ಯೆಗೈದು ನೇಣು ಬಿಗಿದಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ಮಧ್ಯಾಹ್ನ 3 ಜನರು ಬಾಲಕಿಯರನ್ನು ಬೈಕ್ ನಲ್ಲಿ ಕರೆದೊಯ್ದಿದ್ದು, ಆ ಬಳಿಕ ಬಾಲಕಿಯರ ಮೃತದೇಹ,  ದುಪ್ಪಟ್ಟಾದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಬಾಲಕಿಯರು ದುಪ್ಪಟ್ಟಾದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ ಎಂದು ಪೊಲೀಸ್ ಇನ್ಸ್’ಪೆಕ್ಟರ್ ಲಕ್ಷ್ಮಿ ಸಿಂಗ್ ತಿಳಿಸಿದ್ದಾರೆ.

ಕುಟುಂಬದ ಸದಸ್ಯರು ನೀಡಿರುವ ದೂರಿನನ್ವಯ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಗಳು ಇನ್ನಷ್ಟೇ ಬರಬೇಕಿದೆ ಎಂದು ತಿಳಿದು ಬಂದಿದೆ. ಈ ದುಷ್ಕೃತ್ಯದ ವಿರುದ್ಧ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಳವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ