ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಾಲಾ ಪ್ರಾಂಶುಪಾಲ: ಸಂತ್ರಸ್ತೆಯಿಂದ ಆತ್ಮಹತ್ಯೆಗೆ ಯತ್ನ

ಶಾಲಾ ಪ್ರಾಂಶುಪಾಲರಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯೊಬ್ಬಳು ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದುರಂತದ ನಂತರ ಜಿಲ್ಲಾ ಆಸ್ಪತ್ರೆಗೆ ಸಂತ್ರಸ್ತೆಯನ್ನು ದಾಖಲಿಸಲಾಗಿದೆ.
ಶಾಲೆಯ ಪ್ರಾಂಶುಪಾಲ ದೇವೇಂದ್ರ ಕುಮಾರ್ ಮಿಶ್ರಾ ಎಂಬಾತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಜೂನ್ 6, 2024 ರಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ಘಟನೆಯ ವೀಡಿಯೊದಲ್ಲಿ ಪ್ರಾಂಶುಪಾಲರು ವಿದ್ಯಾರ್ಥಿಯೊಂದಿಗೆ ಅನುಚಿತ ವರ್ತನೆ ತೋರಿರುವುದು ಬಯಲಾಗಿದೆ. ಶಾಲೆಯ ಪ್ರಾಂಶುಪಾಲರು ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಅಶ್ಲೀಲ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದು ಶಂಕಿಸಲಾಗಿದೆ.
ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಯುವಕನನ್ನು ಬಂಧಿಸಲು ಪೊಲೀಸರು ಬರುತ್ತಿದ್ದಂತೆ, ಅವನು ಪರಾರಿಯಾಗಲು ಪ್ರಯತ್ನಿಸಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth