ಅಸಭ್ಯ ವರ್ತನೆಗೆ ಗರಂ: ಪೊಲೀಸ್‌ಗೆ ಚಪ್ಪಲಿಯಿಂದ ಹೊಡೆದ ಮಹಿಳೆ

ಅಸಭ್ಯವಾಗಿ ವರ್ತಿಸಿದ ಪೊಲೀಸ್ ಅಧಿಕಾರಿಗೆ ಮಹಿಳೆಯೊಬ್ಬರು ರಸ್ತೆ ಮಧ್ಯೆಯೇ ಚಪ್ಪಲಿಯಿಂದ ಹೊಡೆದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಅಧಿಕಾರಿಗೆ ರಸ್ತೆ ಮಧ್ಯೆಯೇ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾರೆ.
ಇದರಿಂದ ಆಕ್ರೋಶಗೊಂಡ ಪೊಲೀಸ್ ಅಧಿಕಾರಿಯು ಮಹಿಳೆಗೆ ಬೂಟ್ ನಿಂದ ಒದ್ದಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಕ್ರೋಶಗೊಂಡ ಪೊಲೀಸ್ ಅಧಿಕಾರಿಯನ್ನು ಇನ್ನೊಬ್ಬ ಪೊಲೀಸ್ ಅಧಿಕಾರಿ ತಡೆಯಲು ಯತ್ನಿಸಿದರೂ ರಸ್ತೆ ಮಧ್ಯೆಯೇ ಮಹಿಳೆ ಮತ್ತು ಪೊಲೀಸ್ ಅಧಿಕಾರಿ ಮಧ್ಯೆ ಗಲಾಟೆ ನಡೆದಿದೆ.
ಪಾಣಿಗಾಂವ್ ಲಿಂಕ್ ರಸ್ತೆಯಿಂದ ಕೈಲ್ಸಾ ನಗರಕ್ಕೆ ಬರುವ ತಿರುವಿನಲ್ಲಿ ನಿಂತಿದ್ದ ಪೊಲೀಸ್ ಅಧಿಕಾರಿ ಮಾರುಕಟ್ಟೆಯಿಂದ ಶಾಪಿಂಗ್ ಮುಗಿಸಿ ಮಹಿಳೆ ತನ್ನ ಮನೆಗೆ ಹಿಂದಿರುಗುತ್ತಿದ್ದ ಆಟೋವನ್ನು ನಿಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಗೆ ಚಪ್ಪಲಿಯಿಂದ ಹೊಡೆದಿದ್ದಾಳೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.