ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು | ಸಂಪುಟ ವಿಸ್ತರಣೆಯಾದರೆ ಸಚಿವ ಸ್ಥಾನ ಕಳೆದುಕೊಳ್ಳಲಿರುವವರು ಯಾರು? - Mahanayaka
2:01 PM Thursday 4 - September 2025

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು | ಸಂಪುಟ ವಿಸ್ತರಣೆಯಾದರೆ ಸಚಿವ ಸ್ಥಾನ ಕಳೆದುಕೊಳ್ಳಲಿರುವವರು ಯಾರು?

10/11/2020


Provided by

ಬೆಂಗಳೂರು: ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರು ಸಚಿವ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ಸಚಿವರು ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ.

ಇಂದು ಬೆಂಗಳೂರಿನಲ್ಲಿ ಸಚಿವ ಸಂಪುಟ ವಿಸ್ತರಣ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಯಡಿಯೂರಪ್ಪ, ರಾಷ್ಟ್ರೀಯ ನಾಯಕರಾದ ಅಮಿತ್ ಶಾ, ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಸಚಿವ ಸಂಪುಟದಿಂದ ಯಾರನ್ನು ಬಿಡಬೇಕು, ಯಾರನ್ನು ಸೇರಿಸಬೇಕು ಎಂಬ  ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಯಡಿಯೂರಪ್ಪ ಅವರ ಈ ಹೇಳಿಕೆಯ ಬೆನ್ನಲ್ಲೇ ಸಚಿವ ಸ್ಥಾನ ಕಳೆದುಕೊಳ್ಳಲಿರುವವರು ಯಾರು ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.

ಇತ್ತೀಚಿನ ಸುದ್ದಿ