4:07 PM Saturday 31 - January 2026

ಬಿಜೆಪಿ ನಾಯಕರ ಭೇಟಿಯ ಬಳಿಕ ಕೃಷಿ ಕಾಯ್ದೆ ವಿರುದ್ಧದ ಉಪವಾಸ ಸತ್ಯಾಗ್ರಹ ಕೈಬಿಟ್ಟ ಅಣ್ಣಾ ಹಜಾರೆ

30/01/2021

ನವದೆಹಲಿ: ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿದಿದ್ದಾರೆ.

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಣ್ಣಾ ಹಜಾರೆ ಮಹಾರಾಷ್ಟ್ರದ ಅಹ್ಮದ್‌ ನಗರದ ರಾಲೇಗನ್ ಸಿದ್ಧಿಯಲ್ಲಿ ಜನವರಿ 30ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದರು.

ಶುಕ್ರವಾರ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ನಾಯಕರು ಅಣ್ಣಾ ಹಜಾರೆಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರವು ಕೆಲವು ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸತ್ಯಾಗ್ರಹ ಕೈಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

Exit mobile version