4:29 AM Thursday 16 - October 2025

ದಟ್ಟ ಹೊಗೆಯಲ್ಲಿ ಚಿತ್ರೀಕರಣದ ವೇಳೆ ಅಸ್ವಸ್ಥಗೊಂಡ ಉಪೇಂದ್ರ!

upendra
24/11/2022

ನೆಲಮಂಗಲ: ದಟ್ಟ ಹೊಗೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ನಟ ಉಪೇಂದ್ರ ಅವರು ಉಸಿರಾಟದ ತೊಂದರೆಯಿಂದ ಬಳಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಯಿಂದ ಇದೀಗ ಬಿಡುಗಡೆಗೊಳಿಸಲಾಗಿದೆ.

ಸ್ಮೋಕ್ ಎಫೆಕ್ಟ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ದಟ್ಟ ಹೊಗೆಯಲ್ಲಿ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಕೆಮ್ಮು ಶುರುವಾಗಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹೀಗಾಗಿ ಚಿತ್ರ ತಂಡ ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿತ್ತು.

ಚಿಕಿತ್ಸೆಯ ಬಳಿಕ ಉಪೇಂದ್ರ ಚೇತರಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಬಳಿಕ ಶೂಟಿಂಗ್ ಸ್ಥಳಕ್ಕೆ ಆಗಮಿಸಿ ತಾನು ಆರೋಗ್ಯವಾಗಿರುವುದಾಗಿ ಫೇಸ್ ಬುಕ್ ಲೈವ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version