ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ: ಆರೋಪಿ ಸಹಿತ 3 ಕೋಳಿ, ನಗದು, ವಾಹನ ವಶ
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕಜೆಕ್ಕಾರ್ ಗುಡ್ಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಕಾರ್ಯಾಚರಣೆಯ ವೇಳೆ ಉರುವಾಲು ಗ್ರಾಮದ ನೋಣಯ್ಯ ಮುಗೇರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ದಾಳಿಯ ಸುಳಿವು ಸಿಗುತ್ತಿದ್ದಂತೆ ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಸೇರಿದಂತೆ ಇತರ ಐವರು ಆರೋಪಿಗಳು ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ದಾಳಿ ನಡೆಸಿದ ಸ್ಥಳದಿಂದ ಪೊಲೀಸರು ಮೂರು ಕೋಳಿಗಳು, ಜೂಜಾಟಕ್ಕೆ ಬಳಸುತ್ತಿದ್ದ ನಗದು ಹಣ ಹಾಗೂ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಅಕ್ರಮ ಚಟುವಟಿಕೆಯ ಕುರಿತು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಸುರೇಶ್ ಸಿ.ಟಿ. ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸದ್ಯ ಬಂಧಿತ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪರಾರಿಯಾದ ಇತರ ವ್ಯಕ್ತಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























