ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ವಿರುದ್ಧ ಪ್ರಕರಣ ದಾಖಲು - Mahanayaka

ಉಪ್ಪಿನಂಗಡಿ: ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ವಿರುದ್ಧ ಪ್ರಕರಣ ದಾಖಲು

stop rape
05/01/2026

ಉಪ್ಪಿನಂಗಡಿ/ದಕ್ಷಿಣ ಕನ್ನಡ:  ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಚಂದ್ರಶೇಖರ್ ಎಂಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ವಿವರ: ವರದಿಯ ಪ್ರಕಾರ, ನೆಲ್ಯಾಡಿ ಗ್ರಾಮದಲ್ಲಿ ನೇಮೋತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. 15 ವರ್ಷದ ಬಾಲಕಿಯೊಬ್ಬಳು ಬಹಿರ್ದೆಸೆಗೆಂದು ಹೋದಾಗ, ಆರೋಪಿ ಚಂದ್ರಶೇಖರ್ ಆಕೆಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ