ಬಸ್, ಟೆಂಪೋ ಟ್ರಾವೆಲ್ ಮೇಲೆ ಉರುಳಿ ಬಿದ್ದ ಬೃಹತ್ ಮರ!

subramanya
13/06/2022

ಸುಬ್ರಮಣ್ಯ: ಪ್ರತ್ಯೇಕ ಘಟನೆಗಳಲ್ಲಿ ಬಸ್​ ಮತ್ತು ಟೆಂಪೋ ಟ್ರಾವೆಲ್ ಮೇಲೆ ಬೃಹತ್ ಗಾತ್ರದ ಮರಗಳು ಉರುಳಿ ಬಿದ್ದಿರುವ ಘಟನೆ ಕುಕ್ಕೆ ಸುಬ್ರಮಣ್ಯ ಬಳಿ ನಡೆದಿದೆ

ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್​ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ.  ಬಸ್ ಸುಬ್ರಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಯಶಾಂತಿ ಎಂಬಲ್ಲಿ  ಟೆಂಪೋ ಟ್ರಾವೆಲರ್ ಮೇಲೆ ಮರ ಬಿದ್ದು, ವಾಹನ ಜಖಂಗೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಈ ಭಾಗದಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ರಸ್ತೆ ಬದಿಯಲ್ಲಿನ ಅಪಾಯಕಾರಿಯಾಗಿರುವ ಮರಗಳು ಉರುಳಿವೆ ಎಂದು ಹೇಳಲಾಗುತ್ತಿದೆ. ಈ ಭಾಗದ ಹೆದ್ದಾರಿಗಳಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬಿದ್ದು ಪ್ರಾಣಹಾನಿ ಸಹಿತ ಅಪಾಯಗಳು ಆಗುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಡಿ ಕಚೇರಿಗೆ ರಾಹುಲ್ ಗಾಂಧಿ ಅಧಿಕಾರಿಗಳಿಂದ ಹಾಜರು

ಜಿಮ್ ನಲ್ಲಿ ವರ್ಕೌಟ್ ವೇಳೆ ಕುಸಿದು ಬಿದ್ದು ಯುವಕ ಸಾವು!

ಲೈಂಗಿಕ ದೌರ್ಜನ್ಯ ವಿರೋಧಿಸಿದ ಮಹಿಳೆ ಪೇಪರ್ ಕಟರ್ ನಿಂದ ಹಲ್ಲೆ:  ಮಹಿಳೆ ಮುಖಕ್ಕೆ 118 ಹೊಲಿಗೆ!

ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು?: ದೂರು ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

 

ಇತ್ತೀಚಿನ ಸುದ್ದಿ

Exit mobile version