ಇಸ್ರೇಲ್—ಇರಾನ್ ಯುದ್ಧದಲ್ಲಿ ಅಮೆರಿಕ ಹಸ್ತಕ್ಷೇಪ: ಅಮೆರಿಕಕ್ಕೆ ರಷ್ಯಾದಿಂದ ಗಂಭೀರ ಎಚ್ಚರಿಕೆ! - Mahanayaka

ಇಸ್ರೇಲ್—ಇರಾನ್ ಯುದ್ಧದಲ್ಲಿ ಅಮೆರಿಕ ಹಸ್ತಕ್ಷೇಪ: ಅಮೆರಿಕಕ್ಕೆ ರಷ್ಯಾದಿಂದ ಗಂಭೀರ ಎಚ್ಚರಿಕೆ!

Israel Iran war
20/06/2025

ಮಾಸ್ಕೋ: ಇಸ್ರೇಲ್ ಮತ್ತು ಇರಾನ್ ಯುದ್ಧದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪವನ್ನು ರಷ್ಯಾ ಗಮನಿಸುತ್ತಿದ್ದು, ಇದೀಗ ಅಮೆರಿಕಕ್ಕೆ ರಷ್ಯಾ ಎಚ್ಚರಿಕೆ ನೀಡಿದೆ.


Provided by

ಇಸ್ರೇಲ್—ಇರಾನ್ ಉರಿಯುವ ಬೆಂಕಿಗೆ  ಅಮೆರಿಕ ತುಪ್ಪ ಸುರಿಯುತ್ತಿದೆ. ಪಾಕಿಸ್ತಾನದ ನೆಲದಲ್ಲಿ ನಿಂತು ಇರಾನ್ ಮೇಲೆ ದಾಳಿ ನಡೆಸುವ ಬೆದರಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರೋಕ್ಷವಾಗಿ ನೀಡಿದ್ದಾರೆ.  ಇಸ್ರೇಲ್—ಇರಾನ್ ನಡುವಿನ ಕದನದಲ್ಲಿ ಅಮೆರಿಕ ತನ್ನ ಬೇಳೆ ಬೇಯಿಸಿಕೊಳ್ಳಲು ನೋಡುತ್ತಿರುವುದನ್ನು ಇಡೀ ವಿಶ್ವವೇ ಗಮನಿಸುತ್ತಿದೆ. ಈ ನಡುವೆ  ರಷ್ಯಾ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ.

ಇಸ್ರೇಲ್–ಇರಾನ್‌ ಯುದ್ಧದಲ್ಲಿ ಅಮೆರಿಕದ ಸಂಭಾವ್ಯ ಮಿಲಿಟರಿ ಹಸ್ತಕ್ಷೇಪವನ್ನು ತೀವ್ರವಾಗಿ ವಿರೋಧಿಸಿರುವ ರಷ್ಯಾ, “ಮಧ್ಯಪ್ರಾಚ್ಯದ ಸಂಘರ್ಷದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪ ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಲಿದೆ ಎಂದು ಗಂಭೀರ ಎಚ್ಚರಿಕೆ ನೀಡಿದೆ.

ಈ ಪರಿಸ್ಥಿತಿಯಲ್ಲಿ ಮಿಲಿಟರಿ ಹಸ್ತಕ್ಷೇಪದ ವಿರುದ್ಧ ನಾವು ವಾಷಿಂಗ್ಟನ್‌ ಗೆ ನಿರ್ದಿಷ್ಟವಾಗಿ ಎಚ್ಚರಿಕೆ ನೀಡಲು ಬಯಸುತ್ತೇವೆ. ಇದು ನಿಜವಾಗಿಯೂ ಅನಿರೀಕ್ಷಿತ ಋಣಾತ್ಮಕ ಪರಿಣಾಮಗಳನ್ನು ಹೊಂದಿರುವ ಅತ್ಯಂತ ಅಪಾಯಕಾರಿ ಹೆಜ್ಜೆಯಾಗಿದೆ” ಎಂದು ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾರಿಯಾ ಜಖರೋವಾ ವರದಿಗಾರರಿಗೆ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ