5:39 PM Wednesday 22 - October 2025

ಅದಾನಿಯ ಭ್ರಷ್ಟಾಚಾರ ಕೇಸ್ ಅಮೆರಿಕ ತನಿಖೆ ನಡೆಸ್ತಿದೆ, ಹೀಗಾಗಿ ಟ್ರಂಪ್ ಗೆ ಪ್ರಧಾನಿ ಮೋದಿ ತಿರುಗೇಟು ನೀಡುತ್ತಿಲ್ಲ: ರಾಹುಲ್ ಗಾಂಧಿ

rahul gandhi
06/08/2025

ನವದೆಹಲಿ: ಭಾರತ ಉತ್ತಮ ವ್ಯಾವಹಾರಿಕ ಪಾಲುದಾರನಲ್ಲ ಎಂದು ಭಾರತದ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಬೇಕು ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಟ್ರಂಪ್ ನಿರಂತರವಾಗಿ ಭಾರತಕ್ಕೆ ಬೆದರಿಕೆಯೊಡ್ಡುತ್ತಿದ್ದರೂ, ಆ ಬೆದರಿಕೆಗಳಿಗೆ ತಿರುಗೇಟು ನೀಡಲು  ಪ್ರಧಾನಿ ಮೋದಿಯವರಿಂದ ಸಾಧ್ಯವಾಗುತ್ತಿಲ್ಲ, ಯಾಕೆಂದರೆ ಅದಾನಿ ಭ್ರಷ್ಟಾಚಾರದ ಆರೋಪದ ಬಗ್ಗೆ ಅಮೆರಿಕ ತನಿಖೆ ನಡೆಸುತ್ತಿದೆ. ಹೀಗಾಗಿ ಪ್ರಧಾನಿ ಮೋದಿ ಟ್ರಂಪ್ ಗೆ ತಿರುಗೇಟು ನೀಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಎಕ್ಸ್ ನಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಭಾರತ ದಯವಿಟ್ಟು ಅರ್ಥ ಮಾಡಿಕೊಳ್ಳಿ, ಅದಾನಿಯ ಭ್ರಷ್ಟಾಚಾರ ಆರೋಪದ ಕುರಿತು ಅಮೆರಿಕ ತನಿಖೆ ನಡೆಸುತ್ತಿರುವುದರಿಂದ ಟ್ರಂಪ್ ನಿರಂತರ ಬೆದರಿಕೆ ಒಡ್ಡುತ್ತಿದ್ದರೂ ಪ್ರಧಾನಿ ಮೋದಿ ತಿರುಗೇಟು ನೀಡಲು ಸಾಧ್ಯವಾಗುತ್ತಿಲ್ಲ ಎಂದು ರಾಹುಲ್ ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version