ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನವನ್ನು ಸೋಲಿಸಿ ಇತಿಹಾಸ ಬರೆದ ಅಮೆರಿಕ

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿರುವ ಅಮೆರಿಕ ಇತಿಹಾಸ ಬರೆದಿದೆ. ಅಮೆರಿಕದ ಪರ ‘ಸೂಪರ್ ಓವರ್’ ಮಾಡಿರುವ ಭಾರತ ಮೂಲದ ವೇಗದ ಬೌಲರ್ ಸೌರಭ್ ನೇತ್ರವಾಲ್ಕರ್ ಕೆಲವೇ ಹೊತ್ತಿನಲ್ಲಿ ತಾರೆಯಾಗಿ ಹೊರಹೊಮ್ಮಿದ್ದಾರೆ.
ನ್ಯೂಯಾರ್ಕ್‌ನ ಗ್ರ್ಯಾಂಡ್ ಪ್ರಯರಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯ’ಟೈ’ ಆಗಿದ್ದರಿಂದ ಪಂದ್ಯ ವಿಜೇತರನ್ನು ಸೂಪರ್ ಓವರ್‌ನಲ್ಲಿ ನಿರ್ಧರಿಸಲಾಯಿತು.
ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಅಮೆರಿಕ ಒಂದು ವಿಕೆಟ್ ನಷ್ಟಕ್ಕೆ 18 ರನ್ ಗಳಿಸಿತು. ಅಮೆರಿಕದ ಪರ ಸೂಪರ್ ಓವರ್ ಎಸೆದ ಸೌರಭ್, ಕೇವಲ 13 ರನ್ ಬಿಟ್ಟುಕೊಡುವ ಮೂಲಕ ಸ್ಮರಣೀಯ ಗೆಲುವು ದಾಖಲಿಸಲು ನೆರವಾದರು.
1991ನೇ ಇಸವಿಯ ಅಕ್ಟೋಬರ್ 16ರಂದು ಮುಂಬೈಯಲ್ಲಿ ಸೌರಭ್ ನೇತ್ರವಾಲ್ಕರ್ ಜನನವಾಯಿತು. 2010ರ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಬಳಿಕ ಭಾರತ ತಂಡದಲ್ಲಿ ಸ್ಥಾನ ಗಳಿಸುವಲ್ಲಿ ವಿಫಲರಾಗಿದ್ದರು. 2015ರಲ್ಲಿ ಅಮೆರಿಕಕ್ಕೆ ತೆರಳಿದ್ದರು.
ಈ ಮೊದಲು ಮುಂಬೈ ಪರ ರಣಜಿ ಪಂದ್ಯ ಆಡಿದ್ದರು. ಟೀಮ್ ಇಂಡಿಯಾದ ಕೆ.ಎಲ್. ರಾಹುಲ್, ಮಯಂಕ್ ಅಗರ್ವಾಲ್, ಹರ್ಷಲ್ ಪಟೇಲ್, ಜೈದೇವ್ ಉನಾದ್ಕಟ್ ಹಾಗೂ ಸಂದೀಪ್ ಶರ್ಮಾ ಆಗ ಸಹ ಆಟಗಾರರಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth