ಗ್ಯಾರಂಟಿ ಯೋಜನೆಗೆ ಪರಿಶಿಷ್ಟರ ಹಣ ಬಳಕೆ: ಮಹಾನ್ ಅನ್ಯಾಯ ಎಂದ ಮಾಜಿ ಸಚಿವ ವಿ.ಸುನೀಲ್ ಕುಮಾರ್

sunil kumar
02/08/2023

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ 11 ಸಾವಿರ ಕೋಟಿ ರೂ.ನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಶೋಷಿತ ಸಮುದಾಯಗಳಿಗೆ ಮಹಾನ್ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರೇ ಈ ಆರೋಪವನ್ನು ಒಪ್ಪಿಕೊಂಡಿದ್ದಾರೆ. ಎಸ್ ಸಿಎಸ್ ಪಿ, ಟಿಎಸ್ ಪಿ ಗೆ ನಿಗದಿಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದೆಂಬ ನಿಯಮ ಇದೆ. ಆದರೆ ರಾಜ್ಯ ಸರ್ಕಾರ ಇದನ್ನು ಉಲ್ಲಂಘಿಸುವ ಮೂಲಕ ದಲಿತ ಸಮುದಾಯಕ್ಕೆ ಮಹಾಮೋಸ ಮಾಡಿದೆ ಎಂದು ಟೀಕಿಸಿದ್ದಾರೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲೇ ಈ ವಿಚಾರವನ್ನು ಮುಚ್ಚಿಡುವ ಪ್ರಯತ್ನವನ್ನು ಸರ್ಕಾರ ನಡೆಸಿತ್ತು. 2023-24ನೇ ಸಾಲಿನ ಪರಿಷ್ಕೃತ ಬಜೆಟ್ನ ಲಿಂಕ್ ಡಾಕ್ಯುಮೆಂಟ್‌ನಲ್ಲಿ ಗ್ಯಾರಂಟಿ ಯೋಜನೆಗೆ ಈ ಹಣವನ್ನು ಬಳಸಿಕೊಂಡ ಬಗ್ಗೆ ದಾಖಲೆ ಇತ್ತು. ಸರ್ಕಾರ ಸತ್ಯವನ್ನು ಮುಚ್ಚಿ ಹಾಕಲು ನಡೆಸಿದ ಪ್ರಯತ್ನ ಬಯಲಾಗಿದೆ. ಸರ್ಕಾರ ನೀಡುವ ಯಾವುದೇ ಸಮರ್ಥನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರ ಒಂದು ಕೈಯಲ್ಲಿ‌ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ಶೋಷಿತರ ಅಭಿವೃದ್ಧಿಯ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ ನಿಗದಿಯಾದ ಹಣವನ್ನು ಬೇರೆ ಯೋಜನೆಗೆ ಬಳಸಿಕೊಳ್ಳುತ್ತಿರಲಿಲ್ಲ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯುವುದನ್ನು ಅಭ್ಯಾಸ ಮಾಡಿಕೊಳ್ಳಲಿ ಎಂದು ಟೀಕಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version