ಯುವತಿಯ ಮೇಲೆ ಅತ್ಯಾಚಾರ ನಡೆಸಿ ವಿಷ ಕುಡಿಸಿದ ಪಾಪಿಗಳು: ದೂರು ದಾಖಲಿಸಿಕೊಳ್ಳದ ಪೊಲೀಸರು!

ಉತ್ತರಪ್ರದೇಶ: ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆಗೆ ಯತ್ನಿಸಿದ ಆತಂಕಕಾರಿ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ.
ಜ.1ರಂದು ನನ್ನ ಮಗಳು ಯಾವುದೋ ಕೆಲಸಕ್ಕಾಗಿ ಹೊರಗೆ ಹೋಗಿದ್ದಳು ಈ ವೇಳೆ ಕಮಲ್ ಕುಮಾರ್(22) ಎಂಬಾತ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಮತ್ತು ಥಳಿಸಿದ್ದಾನೆ. ಆತನ ಕೃತ್ಯವನ್ನು ಮರೆಮಾಚುವ ಉದ್ದೇಶದಿಂದ ನಮ್ಮ ಮಗಳನ್ನು ಕೊಲ್ಲಲು ತೀರ್ಮಾನಿಸಿದ್ದು, ಆಕೆಗೆ ಬಲವಂತವಾಗಿ ವಿಷ ನೀಡಲಾಗಿದೆ ಎಂದು ಯುವತಿಯ ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಸಂತ್ರಸ್ತೆಯ ಕಿರುಚಾಟವನ್ನು ಕೇಳಿದ ಆಕೆಯ ತಾಯಿ, ಕಮಲ್ ಕುಮಾರ್ ನ ಮನೆಗೆ ಬಂದಿದ್ದಾರೆ. ಆದರೆ, ಆರೋಪಿಯ ಕುಟುಂಬ ಸದಸ್ಯರು ಈ ಅಪರಾಧವನ್ನು ಮರೆಮಾಚಲು ಯುವತಿಯನ್ನು ಕೊಲ್ಲುವ ಉದ್ದೇಶದಿಂದ ಆಕೆಯು ವಿಷ ಸೇವಿಸುವಂತೆ ಮಾಡಿದ್ದಾರೆ ಎಂದಿದ್ದಾರೆ.
ವಿಷ ಸೇವಿಸಿರುವ ಯುವತಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಹಾಗೂ ಆತನ ಕುಟುಂಬಸ್ಥರು ಸೇರಿದಂತೆ 6 ಮಂದಿಯ ವಿರುದ್ಧ ಜಹಾನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಯುವತಿಯ ಪೋಷಕರು ಆರಂಭದಲ್ಲಿ ದೂರು ನೀಡಲು ಆಗಮಿಸಿದಾಗ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣ ಗಂಭೀರ ಸ್ವರೂಪದ್ದಾದರೂ ಈವರೆಗೂ ಪ್ರಕರಣದಲ್ಲಿ ಯಾರೊಬ್ಬರನ್ನು ಬಂಧಿಸದೇ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw