10:46 AM Saturday 23 - August 2025

ಹಿಮಸ್ಫೋಟ: ಸಾವಿನ ಸಂಖ್ಯೆ 18ಕ್ಕೆ ಏರಿಕೆ | 202 ಜನರು ನಾಪತ್ತೆ

08/02/2021

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಿಂದಾಗಿ ಪ್ರವಾಹ ಉಂಟಾದ ನಂತರ ಈವರೆಗೆ ಹದಿನೆಂಟು ಜನರ ಶವಗಳು ಪತ್ತೆಯಾಗಿದ್ದು, ಇನ್ನೂ 202 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯುತ್ ಸ್ಥಾವರದ ಸುರಂಗದಲ್ಲಿ ಸಿಲುಕಿದ್ದ 30 ಜನರನ್ನು ರಕ್ಷಿಸಲು ಪ್ರಯತ್ನ ನಡೆಯುತ್ತಿವೆ. ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು,  202 ಜನರು ನಾಪತ್ತೆಯಾಗಿದ್ದಾರೆ.

ಪ್ರವಾಹದಲ್ಲಿ ಸಿಲುಕಿದವರ ಜೀವ ಉಳಿಸುವುದು ಮತ್ತು ಮೃತ ಕುಟುಂಬಗಳಿಗೆ ಎಲ್ಲಾ ರೀತಿಯ ನೆರವನ್ನು ನೀಡುವುದು ರಾಜ್ಯ ಸರ್ಕಾರದ ಆದ್ಯತೆಯಾಗಿದೆ ಎಂದು ಸಿಎಂ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.

ಕೇಂದ್ರ ಸಚಿವರಾದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಆರ್‌.ಕೆ. ಸಿಂಗ್ ಜೊತೆಗೆ ಪೌರಿ ಸಂಸದ ತಿರಥ್ ಸಿಂಗ್ ರಾವತ್, ಉತ್ತರಾಖಂಡ ಸಚಿವ ಧನ್ ಸಿಂಗ್ ರಾವತ್ ಕೂಡ ವಿಪತ್ತು ಪೀಡಿತ ತಪೋವನ ಮತ್ತು ರೈನಿಯಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ಅವರಿಗೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

Exit mobile version