11:33 AM Wednesday 20 - August 2025

ಪೊಲೀಸ್ ಠಾಣೆಗೆ ದೂರು ನೀಡಲು ತೆರಳುತ್ತಿದ್ದ ಯುವತಿಯ ಸಾಮೂಹಿಕ ಅತ್ಯಾಚಾರ!

23/11/2020

ಶಾಮ್ಲಿ:  ದೂರು ನೀಡಲು ಪೊಲೀಸ್ ಠಾಣೆಗೆ ಹೋಗುತ್ತಿದ್ದ ವೇಳೆ ಯುವತಿಯನ್ನು ಅಡ್ಡಗಟ್ಟಿದ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ದೂರು ನೀಡಲೆಂದು ಪೊಲೀಸ್ ಠಾಣೆಗೆ ತೆರಳಿದ್ದ ಯುವತಿ ಗಾಯಗೊಂಡ ಸ್ಥಿತಿಯಲ್ಲಿ ಮನೆಗೆ ಮರಳಿದ್ದಾಳೆ. ಆ ಬಳಿಕ ಮನೆಯವರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಭೂಮಿ ತಕರಾರಿಗೆ ಸಂಬಂಧಿಸಿದಂತೆ ಯುವತಿ ದೂರು ನೀಡಲು ತೆರಳಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಯುವತಿ ಹಾಗೂ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿರುವ ದೂರಿನನ್ವಯ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಶಾಮ್ಲಿಯ ಪೊಲೀಸ್ ವರಿಷ್ಠಾಧಿಕಾರಿ ನಿತ್ಯಾನಂದ ರಾಯ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version