ವಿ.ಸೋಮಣ್ಣಗೆ ಒಲಿಯಿತು, ಕೇಂದ್ರ ಸಚಿವ ಸ್ಥಾನ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾದ ವಿ.ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನ ಖಚಿತವಾಗಿದೆ.
ನರೇಂದ್ರ ಮೋದಿ ಅವರ ಮನೆಯ ಚಹಾಕೂಟದಲ್ಲಿ ಭಾಗಿಯಾಗಿದ್ದ ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನ ಖಾತ್ರಿಯಾಗಿದೆ ಎಂದು ಹೇಳಲಾಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿಗೆ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ.
ಇನ್ನೂ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ವಿ.ಸೋಮಣ್ಣ, ಸಚಿವ ಸ್ಥಾನ ಸಿಗುವ ನಿರೀಕ್ಷೆ ಇರಲಿಲ್ಲ. 11 ಗಂಟೆಗೆ ಕರೆ ಬಂತು. ಅಲ್ಲಿಗೆ ಹೋದೆ. ನಿನ್ನನ್ನು ಕೇಂದ್ರ ಸಚಿವ ಮಾಡಿದ್ದೇವೆ ಅಂತ ಹೇಳಿದರು ಎಂದು ಅವರು ವಿವರಿಸಿದರು.
ಇನ್ನು ಮುಂದೆ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ. ಅದನ್ನು ನಿರ್ವಹಣೆ ಮಾಡುತ್ತೇನೆ. ಯಾವ ಖಾತೆಯ ನಿರೀಕ್ಷೆಯೂ ನನಗಿಲ್ಲ ಎಂದರು.
ಮೋದಿ ಅವರು ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದರು. ಅವುಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡುವುದಾಗಿ ಇದೇ ವೇಳೆ ಸೋಮಣ್ಣ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97