ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನಾಡಿದವರನ್ನು ಯಾಕೆ ಮುಟ್ಟುತ್ತಿಲ್ಲ?: ವಿ. ಸುನೀಲ್ ಕುಮಾರ್ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ ಆರೋಪ ಮಾಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಖುದ್ದು ರಾಜ್ಯ ಸರ್ಕಾರವೇ ” ದ್ವೇಷ ಭಾಷೆ” ಯ ಪ್ರಚಾರ ನಡೆಸುತ್ತಿದ್ದು, ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದು ಸಂಘಟನೆಗೆ ಸೀಮಿತಗೊಳಿಸುತ್ತಿದೆ. ಅಷ್ಟಕ್ಕೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹಾಗೂ ಹಿಂಸೆಗೆ ಪ್ರೇರಣೆ ನೀಡಿದವರು ಯಾರು ? ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನು ಆಡಿದವರನ್ನು ಪೊಲೀಸರು ಏಕೆ ಮುಟ್ಟುತ್ತಿಲ್ಲ ? ಎಂದು ಪ್ರಶ್ನಿಸಿದ್ದಾರೆ.
ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರಿಗೆ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ರವಾನಿಸಿದವರ ಮೇಲೆ ಮಾತ್ರ ನಿಮ್ಮ ಕಾನೂನು ಕ್ರಮವೇ ? ಎಂದು ಪ್ರಶ್ನಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD