‘ಪ್ರೇಮಿಗಳ ದಿನಾಚರಣೆ’ಗೆ ಮಂಗಳೂರಿನಲ್ಲಿ ಬಜರಂಗದಳ ವಿರೋಧ - Mahanayaka
11:02 AM Wednesday 9 - September 2026

‘ಪ್ರೇಮಿಗಳ ದಿನಾಚರಣೆ’ಗೆ ಮಂಗಳೂರಿನಲ್ಲಿ ಬಜರಂಗದಳ ವಿರೋಧ

11/02/2021

ಮಂಗಳೂರು: ಫೆ.14ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನಾಚರಣೆ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಮಂಗಳೂರಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಬಜರಂಗದಳ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಜರಂಗ ದಳದ ದ.ಕ.ಜಿಲ್ಲಾ ಸಂಯೋಜಕ ಪುನೀತ್ ಅತ್ತಾವರ, ಭಾರತ ದೇಶವು ಪುಣ್ಯ ಭೂಮಿ ವೈಶಿಷ್ಟ್ಯವಾ ಸಂಸ್ಕೃತಿ ಸಂಸ್ಕಾರವನ್ನು ನಮ್ಮ ದೇಶ ಹೊಂದಿದೆ. ಅಲ್ಲದೇ ನಮ್ಮ ಸಂಸ್ಕೃತಿ, ಆಚರಣೆಗಳಿಗೆ ಅದರದ್ದೇ ಆದ ಮಹತ್ವವಿದೆ. ಆದರೆ ಭಾರತೀಯ ಸಂಸ್ಕೃತಿಗೆ ಸೆಡ್ಡು ಹೊಡೆಯುತ್ತಾ ಪಾಶ್ಚಿಮಾತ್ಯ ಸಂಸ್ಕೃತಿಗಳು ದಾಳಿ ಮಾಡುತ್ತಿವೆ ಎಂದು ಹೇಳಿದ್ದಾರೆ.

ಪಾಶ್ಚಿಮಾತ್ಯ ಸಂಸ್ಕೃತಿಗಳು ಯುವ ಸಮುದಾಯವನ್ನು ತನ್ನಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿವೆ. ನಮ್ಮ ಅತ್ಯಮೂಲ್ಯವಾದ ಸಂಸ್ಕೃತಿ ಆಚರಣೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದಕ್ಕೆ ಸ್ಪಷ್ಟ ಉದಾಹರಣೆ ಪ್ರೇಮಿಗಳ ದಿನಾಚರಣೆಯಾಗಿದ್ದು, ಪ್ರೇಮಿಗಳ ದಿನಾಚರಣೆಯನ್ನು ನಾವು ವಿರೋಧಿಸುತ್ತೇವೆ. ಪ್ರೇಮಿಗಳ ದಿನಾಚರಣೆಯ ಹೆಸರಿನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು, ಇದನ್ನು ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರೇಮಿಗಳ ದಿನಾಚರಣೆಯನ್ನು ಆಚರಿಸಬಾರದು,  ನಗರದ ಯಾವುದೇ ಹೂ ಅಂಗಡಿ ಮತ್ತು  ಗಿಫ್ಟ್ ಸೆಂಟರ್ ಗಳಲ್ಲಿ ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದ ಯಾವುದೇ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಪುನೀತ್ ಮನವಿ ಮಾಡಿಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti