ವಾಲ್ಮೀಕಿ ನಿಗಮದಲ್ಲಿ ಹಗರಣ: ಮಾಜಿ ಸಚಿವ ನಾಗೇಂದ್ರ ಬಂಧನ ಸಾಧ್ಯತೆ - Mahanayaka

ವಾಲ್ಮೀಕಿ ನಿಗಮದಲ್ಲಿ ಹಗರಣ: ಮಾಜಿ ಸಚಿವ ನಾಗೇಂದ್ರ ಬಂಧನ ಸಾಧ್ಯತೆ

nagendra
10/07/2024

ಬೆಂಗಳೂರು:  ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು,  ರಾಜ್ಯಾದ್ಯಂತ ಇಂದು ಬೆಳಗ್ಗಿನಿಂದಲೇ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ಶಾಕ್ ನೀಡಿದ್ದಾರೆ.

ವರದಿಗಳ ಪ್ರಕಾರ,  ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ 18ಕ್ಕೂ ಹೆಚ್ಚು ಕಡೆ ದಾಳಿ ಮಾಡಿರುವ ಇ.ಡಿ ಅಧಿಕಾರಿಗಳು, ಮಾಜಿ ಸಚಿವ ನಾಗೇಂದ್ರ ಅವರನ್ನು ಕರೆದುಕೊಂಡು ಹೋಗಿದ್ದಾರೆ. ಅಲ್ಲದೇ ನಾಗೇಂದ್ರ ಅವರ ಪಿ.ಎ. ಹರೀಶ್ ಅವರನ್ನು ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆ ಬಳಿಕ  ಹರೀಶ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಪಿ.ಎ ಹರೀಶ್‌ ಅವರ ಪಾತ್ರದ ಬಗ್ಗೆಯು ಸುಳಿವು ಸಿಕ್ಕಿದೆ ಎನ್ನಲಾಗಿದೆ. ಹರೀಶ್ ಅವರ ಅಕೌಂಟ್‌ ಗೆ ಎಂ.ಡಿ ಪದ್ಮನಾಭ ಕಡೆಯಿಂದ ಹಣ ವರ್ಗಾವಣೆ ಆಗಿದೆ. 25 ಲಕ್ಷ ರೂಪಾಯಿ ಹಣ ಬಂದಿರುವ ಹಿನ್ನೆಲೆಯಲ್ಲಿ ಹರೀಶ್ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಹರೀಶ್ ಅವರ ಮೇಲೆ ಸಚಿವ ನಾಗೇಂದ್ರ ಪರ 50 ರಿಂದ 60 ಕೋಟಿ ವ್ಯವಹಾರ ನಡೆಸಿದ ಶಂಕೆ ಇದೆ ಎನ್ನಲಾಗಿದೆ ಹೀಗಾಗಿ ಹೆಚ್ಚಿನ ವಿಚಾರಣೆಗೆ ಹರೀಶ್‌ ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಹರೀಶ್  ಅವರು ಈ ಪ್ರಕರಣದಲ್ಲಿ ನಾಗೇಂದ್ರ ಅವರ ಪರ ಕೆಲಸ ಮಾಡಿದ್ದಾರೆ ಎನ್ನುವ ಸುಳಿವು ಲಭ್ಯವಾದರೆ ನಾಗೇಂದ್ರ ಅವರನ್ನು ಕೂಡ ಈ ಪ್ರಕರಣದಲ್ಲಿ ಬಂಧಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ.

ಸೂಕ್ತ ಸಾಕ್ಷಿ ಸಹಿತವಾಗಿ ನಾಗೇಂದ್ರ ಅವರನ್ನು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸತತ 6 ಗಂಟೆಗಳಿಂದ ಮಾಜಿ ಸಚಿವ ನಾಗೇಂದ್ರ ಅವರ ನಿರಂತರ ವಿಚಾರಣೆ ನಡೆದಿದೆ. ಇಂದು ಸಂಜೆಯ ವೇಳೆಗೆ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ