ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟಿ ಕೋಟಿ ಹಣ ಲೂಟಿ: 4 ಕೋಟಿ ರೂ. ರಹಸ್ಯ ಬಯಲು

ed
13/07/2024

ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟಿ ಕೋಟಿ ಹಣಗಳ ಲೂಟಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ರಾಯಚೂರಿನಲ್ಲಿ ಮಹತ್ವದ ದಾಖಲೆ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಸುಮಾರು 4 ಕೋಟಿ ರೂಪಾಯಿ ಹಣದ ರಹಸ್ಯ ಭೇದಿಸಿದ್ದಾರೆ. ಕಾಂಗ್ರೆಸ್ ಶಾಸಕ, ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಸಂಬಂಧಿ ಕಾರ್ತಿಕ್ ಮೂಲಕ ಸುಮಾರು 4 ಕೋಟಿ ರೂಪಾಯಿ ವ್ಯವಹಾರ ನಡೆದಿರುವುದನ್ನು ಇಡಿ ಪತ್ತೆ ಮಾಡಿದೆ.

ರಾಯಚೂರು ತಾಲೂಕಿನ ಆಸ್ಕಿಹಾಳ ಗ್ರಾಮದಲ್ಲಿ ದದ್ದಲ್ ಸಂಬಂಧಿ ಕಾರ್ತಿಕ್ ಎಂಬಾತ ಲಕ್ಷ್ಮೀದೇವಿ ಎಂಬ ಮಹಿಳೆಯಿಂದ 4 ಕೋಟಿ ರೂಪಾಯಿ ಕೊಟ್ಟು ಜಮೀನು ಖರೀದಿ ಮಾಡಿದ್ದ. ಕಾರ್ತಿಕ್, ಆಂಜನೇಯ ಎಂಬುವರ ಹೆಸರಿನಲ್ಲಿ ಜಮೀನು ನೋಂದಣಿಯಾಗಿದೆ. ಲಕ್ಷ್ಮೀದೇವಿಗೆ 25 ಲಕ್ಷ ಮೊತ್ತದ 3 ಚೆಕ್​ ಗಳನ್ನು ಕಾರ್ತಿಕ್, ಆಂಜನೇಯ ನೀಡಿದ್ದರು. ಉಳಿದ ಹಣವನ್ನ ನಗದು ರೂಪದಲ್ಲಿ ನೀಡಲಾಗಿತ್ತು ಎನ್ನಲಾಗಿದೆ.

ಜಮೀನು ಮಾರಿದ್ದ ಲಕ್ಷ್ಮೀದೇವಿ ಹೊಸ ಮನೆ ಖರೀದಿಸಿದ್ದರು. ಅದರ ಗೃಹ ಪ್ರವೇಶ ದಿನವೇ ಇಡಿ ಅಧಿಕಾರಿಗಳು ಶಾಕ್ ಕೊಟ್ಟಿದ್ದು, ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version