ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ - Mahanayaka

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

nagendra
12/07/2024


Provided by

ಬೆಂಗಳೂರು:  ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಚಿವ ನಾಗೇಂದ್ರ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಇಡಿ ವಶಕ್ಕೆ ಪಡೆದುಕೊಂಡಿದೆ.

ಪ್ರಕರಣದ ವಿಚಾರಣೆಗೆ ನಾಗೇಂದ್ರ ಮನೆಗೆ ನಾಲ್ವರು ಅಧಿಕಾರಿಗಳ ತಂಡ ಆಗಮಿಸಿದ್ದು, ಬಳಿಕ ಅಧಿಕಾರಿಗಳು ನಾಗೇಂದ್ರ ಅವರನ್ನ ವಶಕ್ಕೆ ಪಡೆದಿದೆ ಎಂದು ವರದಿ ತಿಳಿಸಿದೆ.

ಬುಧವಾರ ಬೆಳ್ಳಂಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಈಟಿ ಅಧಿಕಾರಿಗಳು ದಾಳಿ ಮಾಡಿದ್ದು, ಬಳಿಕ ಇಡಿ ಅಧಿಕಾರಿಗಳು  ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು  ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ