9:21 PM Sunday 14 - September 2025

ವರಾಹ ರೂಪಂ ಹಾಡು ನಮ್ಮದೇ: ಧರ್ಮಸ್ಥಳದಲ್ಲಿ ರಿಷಬ್ ಶೆಟ್ಟಿ ಹೇಳಿಕೆ

rishab shetty
03/11/2022

ಬೆಳ್ತಂಗಡಿ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ  ಭೇಟಿ ನೀಡಿ  ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಹಾಗೂ  ಹೇಮಾವತಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತರಾಗಿ ಇತ್ತೀಚೆಗೆ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ದಂಪತಿಯನ್ನು ಗೌರವಿಸಿ ಅಭಿನಂದಿಸಿದರು. ನಟ ಪ್ರಮೋದ್ ಶೆಟ್ಟಿ ಕೂಡಾ ಉಪಸ್ಥಿತರಿದ್ದರು.

ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ, ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಹಿಂದಿ, ತುಳು ಹಾಗೂ ಇತರ ಭಾಷೆಗಳಲ್ಲಿಯೂ ಸದ್ಯದಲ್ಲಿಯೇ ಕಾಂತಾರ ಪ್ರದರ್ಶನವಾಗಲಿದೆ. ಈ ಬಗ್ಗೆ ದಿನಂಕಗಳನ್ನು ಪ್ರಕಟಿಸಲಾಗುವುದು ಎಂದರು. ಹಾಡಿನ ವಿವಾದದ ಬಗ್ಗೆ ಮಾತನಾಡಿದ ಅವರು ಇದು ಚಲನಚಿತ್ರ ಜನಪ್ರಿಯವಾದಾಗ ಸಾಮಾನ್ಯವಾಗಿದೆ. ಅದಕ್ಕೆ ಉತ್ತರಕೊಡುವ ಕಾರ್ಯವನ್ನು ಸಂಗೀತ ನಿರ್ದೇಶಕರು ಮಾಡಲಿದ್ದಾರೆ ಎಂದು ಹೇಳಿದರು.

ಸಿನಿಮಾ ತಯಾರಿ ಮೊದಲೇ ಧರ್ಮಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವಾದಿಸಿದಂತಾಗಿದೆ ಎಂದು ಹೇಳಿದರು.

ಪತ್ನಿ ಪ್ರಗತಿ ಶೆಟ್ಟಿ ಮಾತನಾಡಿ ಇನ್ನು ಎರಡು ತಿಂಗಳು ತೀರ್ಥಯಾತ್ರೆ ಮಾಡುವ ಕಾರ್ಯಕ್ರಮವಿದ್ದು ಬಳಿಕ ಕೊಂಚ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version