ವರ್ಗಾವಣೆ ಆದದ್ದಕ್ಕೆ ಮನನೊಂದು ಬೆಂಕಿ ಹಚ್ಚಿಕೊಂಡು ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಯತ್ನ!? - Mahanayaka
12:39 PM Thursday 28 - August 2025

ವರ್ಗಾವಣೆ ಆದದ್ದಕ್ಕೆ ಮನನೊಂದು ಬೆಂಕಿ ಹಚ್ಚಿಕೊಂಡು ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಯತ್ನ!?

chamarajanagara
21/01/2023


Provided by

ಚಾಮರಾಜನಗರ: ವರ್ಗಾವಣೆ ಆದದ್ದಕ್ಕೆ ಮನನೊಂದ ಪೊಲೀಸ್ ಕಾನ್ಸ್‌ಟೇಬಲ್ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್‌ಟೇಬಲ್ ಎಚ್.ಆರ್.ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಅವರನ್ನು ಹನೂರು ಠಾಣೆಗೆ ವರ್ಗಾವಣೆ ಮಾಡಿ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ವರ್ಗಾವಣೆ ಮಾಡಿದ್ದರು. ಜೊತೆಗೆ, ಇತರೆ ಠಾಣೆಗಳ 7 ಮಂದಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು.

ವರ್ಗಾವಣೆಯಿಂದ ಮನನೊಂದು  ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.  ಪಕ್ಕೆಲುಬು, ಕೈ-ಕಾಲಿಗೆ ಸುಟ್ಟ ಗಾಯಗಳಾಗಿದ್ದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು, ಈ ಸಂಬಂಧ, ಎಸ್ಪಿ ಶಿವಕುಮಾರ್ ಪ್ರತಿಕ್ರಿಯಿಸಿ, ವಿಚಾರ ಗಮನಕ್ಕೆ ಬಂದಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಯತ್ನಿಸಿದರು ಎಂದು ತಿಳಿದುಬಂದಿಲ್ಲ, ಕೆಲವರಿಗೆ ಎಚ್ಚರಿಕೆ ಕೊಡುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿತ್ತು, ಪರಿಶೀಲನೆ ನಡೆಸಿ ಬಳಿಕ ಹೆಚ್ಚಿನ ವಿವರ ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ