ಅಲೆಮಾರಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳು
ಮಂಗಳೂರು: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ–ಸೌಲಭ್ಯವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ನಿಗಮದ http://kaad.karnataka.gov.in/ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ.: 080-22374832/833 ಹಾಗೂ ಜಿಲ್ಲಾ ಕಚೇರಿಯ ದೂ.ಸಂ.: 0824-2456544ನ್ನು ಸಂಪರ್ಕಿಸಬಹುದು.
2024–25 ಮತ್ತು 2025–26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಅರ್ಜಿದಾರರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅಂತಹ ಅರ್ಜಿದಾರರನ್ನು ಪ್ರಸಕ್ತ ಸಾಲಿಗೂ ಸಹ ಪರಿಗಣಿಸಲಾಗುತ್ತದೆ. 2024–25 ಮತ್ತು 2025–26ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿರುವ ಯೋಜನೆಯನ್ನು ಹೊರತುಪಡಿಸಿ ಉಳಿದ ಯೋಜನೆಗಳಿಗೆ ಪ್ರಸಕ್ತ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD




























