ವರ್ತೂರು ಸಂತೋಷ್ ಗೆ ಸಂಕಷ್ಟ: ಕಾನೂನು ಹೋರಾಟಕ್ಕೆ ಮುಂದಾದ ಹಳ್ಳಿಕಾರ್ ಸಂರಕ್ಷಕರು

varthua santhosa
24/02/2024

ಮಂಡ್ಯ: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರ ವಿರುದ್ಧ ಹಳ್ಳಿಕಾರ್ ಸಂರಕ್ಷಕರು ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಹಳ್ಳಿಕಾರ್ ಒಡೆಯ ಎಂದು ವರ್ತೂರು ಸಂತೋಷ್ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಹಳ್ಳಿಕಾರ್ ತಳಿ ಸಂರಕ್ಷರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರ್ತೂರು ಸಂತೋಷ್ ಗೆ ಹಳ್ಳಿಕಾರ್ ಒಡೆಯ ಎಂಬ ಬಿರುದು ಇದೀಗ ವಿವಾದದ ಕಾರಣವಾಗಿದೆ. ಈ ಬಗ್ಗೆ ವರ್ತೂರು ಸಂತೋಷ್ ಬೆಂಬಲಿಗರಿಗೆ ಹಳ್ಳಿಕಾರ್ ತಳಿ ಸಂರಕ್ಷಕರು ತಿಳುವಳಿಕೆ ಮೂಡಿಸಲು ನಡೆಸಿದ್ದ ಚರ್ಚಾಗೋಷ್ಠಿ ಜಟಾಪಟಿಯಲ್ಲಿ ಮುಕ್ತಾಯವಾಗಿತ್ತು. ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ವರ್ತೂರು ಸಂತೋಷ್ ತಮ್ಮ ವಿರೋಧಿಗಳಿಗೆ ಟಾಂಗ್ ನೀಡಿದ್ದು, ಏಕ ವಚನದಲ್ಲೇ ಹರಿಹಾಯ್ದಿದ್ದರು.

ವರ್ತೂರು ಸಂತೋಷ್ ಹಳ್ಳಿಕಾರ್ ಒಡೆಯ ಎಂದು ಕರೆಸಿಕೊಳ್ಳುತ್ತಿರೋದು ಸರಿಯಲ್ಲ, ಇದು ಹಳ್ಳಿಕಾರ್ ಜನಾಂಗಕ್ಕೆ ಅಪಮಾನ, ತಲಾತಲಾಂತರದಿಂದ ಹಳ್ಳಿಕಾರ್ ಸಂರಕ್ಷಣೆ ಮಾಡ್ತಿರುವ ರೈತರ ಭಾವನೆಗೂ ಧಕ್ಕೆ, ಅವಮಾನ ಆಗಿದೆ. ಗೂಗಲ್ ನಲ್ಲಿಯೂ ಹಳ್ಳಿಕಾರ್ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಹಳ್ಳಿಕಾರ್ ಸಂರಕ್ಷಕ ರವಿ ಪಟೇಲ್ ಎಚ್ಚರಿಕೆ ನೀಡಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ

Exit mobile version