ಸೇನಾ ವಿಮಾನ ಪತನ: 14 ಮಂದಿಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಇವರೊಬ್ಬರೇ… - Mahanayaka
12:34 PM Wednesday 15 - October 2025

ಸೇನಾ ವಿಮಾನ ಪತನ: 14 ಮಂದಿಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಇವರೊಬ್ಬರೇ…

captain varun singh
08/12/2021

ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ  ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ.


Provided by

ವರುಣ್ ಸಿಂಗ್ ಅವರು ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವಾಯುಪಡೆ ಟ್ವೀಟ್ ಮಾಡಿದೆ. ಇನ್ನೂ ವರುಣ್ ಸಿಂಗ್ ಅವರು ಜೀವಂತ ಇರುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಸ್ಪಷ್ಟಪಡಿಸಿ ಟ್ವೀಟ್ ಮಾಡಿದ್ದು, ಘಟನೆಯಲ್ಲಿಮೃತಪಟ್ಟ 13 ಮಂದಿಗೆ ಸಂತಾಪ ವ್ಯಕ್ತಪಡಿಸಿರುವ ಅವರು, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಕ್ಯಾಪ್ಟನ್ ವರುಣ್ ಸಿಂಗ್ ಅವರು ಪ್ರಸ್ತುತ ವೆಲ್ಲಿಂಗ್ ಟನ್ ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಂಗ್ ಅವರಿಗೆ  2020ರಲ್ಲಿ  ತಮ್ಮ ತೇಜಸ್ ಯುದ್ಧ ವಿಮಾನವನ್ನು ಕಾಪಾಡಿಕೊಂಡಿದ್ದಕ್ಕಾಗಿ  ಶೌರ್ಯ ಚಕ್ರ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆದಿ ಉಡುಪಿ: ಡಾ.ಬಿ.ಆರ್.ಅಂಬೇಡ್ಕರ ಅವರ 65ನೇ ಮಹಾಪರಿನಿಬ್ಬಾಣ ದಿನ ನಮನ | BSI ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸೇನಾ ಹೆಲಿಕಾಫ್ಟರ್ ಪತನ: ಬಿಪಿನ್ ರಾವತ್ ಪತ್ನಿ ಮಧುಲಿಕಾ ಮೃತ್ಯು?, ಬಿಪಿನ್ ರಾವತ್ ಸ್ಥಿತಿ ಗಂಭೀರ!

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ | ಡೆತ್ ನೋಟ್ ಆಧಾರದಲ್ಲಿ ಓರ್ವ ಮಹಿಳೆ ಪೊಲೀಸ್ ವಶಕ್ಕೆ

ನನ್ನ ಅಸಮಾಧಾನ ‘ಮೋದಿಯ ನೀತಿ’ಗಳ ವಿರುದ್ಧ, ಬಿಜೆಪಿಯ ವಿರುದ್ಧವಲ್ಲ | ಮಂಗಳೂರಿನಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿಕೆ

ನಡು ರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್, ಕಂಡೆಕ್ಟರ್ ನಡುವೆ ಹೊಡೆದಾಟ! | ವಿಡಿಯೋ ವೈರಲ್

ಇತ್ತೀಚಿನ ಸುದ್ದಿ