ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ - Mahanayaka
11:15 AM Sunday 7 - September 2025

ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

hostel
09/02/2022

ಬೆಳಗಾವಿ: ರಾಮದುರ್ಗ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ನಿಲಯದಲ್ಲಿ ಊಟ ಸೇವಿಸಿ 14ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.


Provided by

ಅಸ್ವಸ್ಥರಾಗಿದ್ದ 14 ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅದರಲ್ಲಿ ನಾಲ್ವರು ವಿದ್ಯಾರ್ಥಿನಿಯರಿಗೆ ರಾಮದುರ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಮದುರ್ಗ ತಹಶಿಲ್ದಾರ್ ಮಾಹಿತಿ ನೀಡಿದ್ದಾರೆ. ಹಾಸ್ಟೆಲ್‍ ನಲ್ಲಿ ಊಟದ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಹಾಸ್ಟೆಲ್‍ನಲ್ಲಿ ಊಟ ಸರಿಯಾಗಿ ಕೊಡಲ್ಲ. ಗುಣಮಟ್ಟದ ಆಹಾರವನ್ನು ಹಾಸ್ಟೆಲ್ ಸಿಬ್ಬಂದಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿಯರ ಆರೋಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮರದ ಕೊಂಬೆ ಬಿದ್ದು ಸ್ಥಳದಲ್ಲೇ ಯುವಕ ಸಾವು\

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ವಕೀಲ ರಾಜೇಶ್ ಭಟ್‌​ಗೆ ಷರತ್ತುಬದ್ಧ ಜಾಮೀನು

ಬೆಟ್ಟದಲ್ಲಿ ಸಿಲುಕಿದ್ದ ಯುವಕನನ್ನು ರಕ್ಷಿಸಿದ ಭಾರತೀಯ ಸೇನೆ

ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಧ್ರುವನಾರಾಯಣ

ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ

 

ಇತ್ತೀಚಿನ ಸುದ್ದಿ